ADVERTISEMENT

ರಾಮಮಂದಿರ ನಿರ್ಮಾಣ: ವಿಎಚ್‌ಪಿ ಮಾದರಿಗೆ ಆಕ್ಷೇಪ

​ಪ್ರಜಾವಾಣಿ ವಾರ್ತೆ
Published 1 ಜೂನ್ 2020, 20:00 IST
Last Updated 1 ಜೂನ್ 2020, 20:00 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಲಖನೌ: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಸಂಬಂಧ ವಿಶ್ವ ಹಿಂದೂ ಪರಿಷತ್ ರೂಪಿಸಿರುವ ಮಾದರಿಗೆ ರಾಮಜನ್ಮ ಭೂಮಿ ಟ್ರಸ್ಟ್‌ ಸದಸ್ಯರು ಆಕ್ಷೇಪ ವ್ಯಕ್ತವಾಗಿದೆ.

ದಿಗಂಬರ ಅಖಾಡ ಮುಖ್ಯಸ್ಥ ಮಹಂತ್‌ಸುರೇಶ್‌ ದಾಸ್‌, ಬಿಜೆಪಿಮಾಜಿ ಸಂಸದ ರಾಮ್‌ ವಿಲಾಸ್‌ ವೇದಾಂತಿಮೊದಲಾದವರು ಈ ಸಂಬಂಧ ಸಭೆನಡೆಸಿ ವಿರೋಧ ವ್ಯಕ್ತಪಡಿಸಿದ್ದಾರೆ.

‘ವಿಎಚ್‌ಪಿ ಪ್ರಸ್ತಾವಿಸಿರುವ ಮಂದಿ ರದ ಮಾದರಿಯು ಹಳೆಯದಾಗಿದ್ದು, ಅದರಲ್ಲಿ ಅಗತ್ಯ ಬದಲಾವಣೆ ತರಬೇಕಿದೆ. ವೈಭವಯುತ ಮಂದಿರ ನಿರ್ಮಾಣ ಮಾಡಬೇಕು. ಇದಕ್ಕಾಗಿ ಸಂಪನ್ಮೂಲಗಳ ಕೊರತೆ ಇಲ್ಲ ಎಂದು ಹೇಳಿದ್ದಾರೆ.

ADVERTISEMENT

ರಾಮಮಂದಿರ ನಿರ್ಮಾಣ ಚಳವಳಿಯಲ್ಲಿ ಭಾಗವಹಿಸಿದ್ದವರನ್ನು ಕಡೆಗಣಿಸಲಾಗಿದೆ ಎಂದು ಆರೋಪಿಸಿದ್ದಾರೆ.

ಸ್ಥಳೀಯ ಬಿಜೆಪಿ ಶಾಸಕ ವೇದ ಪ್ರಕಾಶ್‌ ಗುಪ್ತ ಅವರನ್ನು ಭೇಟಿ ಮಾಡಿ, ಮನವಿ ಪತ್ರ ಸಲ್ಲಿಸಿದ್ದಾರೆ.ಈ ಮನವಿ ಪತ್ರವನ್ನು ಪ್ರಧಾನಿ ನರೇಂದ್ರ ಮೋದಿ ಹಾಗೂ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರಿಗೂ ಕಳುಹಿಸುವುದಾಗಿ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.