ವಿಶಾಖಪಟ್ಟಣ: ಆಂಧ್ರಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷೆ ವೈ.ಎಸ್. ಶರ್ಮಿಳಾ ಅವರು ಬುಧವಾರ ವಿಶಾಖಪಟ್ಟಣಂ ಸ್ಟೀಲ್ ಪ್ಲಾಂಟ್ ಕಾರ್ಖಾನೆಯ ಗುತ್ತಿಗೆ ಕಾರ್ಮಿಕರನ್ನು ಬೆಂಬಲಿಸಿ ಅನಿರ್ದಿಷ್ಟಾವಧಿ ಸತ್ಯಾಗ್ರಹ ಆರಂಭಿಸಿದರು.
ಇತ್ತೀಚೆಗೆ ಕಾರ್ಖಾನೆಯು 2000 ಗುತ್ತಿಗೆ ಕಾರ್ಮಿಕರನ್ನು ವಜಾ ಮಾಡಿತ್ತು. ಕಾರ್ಖಾನೆಯ ಕ್ರಮವನ್ನು ವಿರೋಧಿಸಿ ಶರ್ಮಿಳಾ ಉಪವಾಸ ಸತ್ಯಾಗ್ರಹ ನಡೆಸಿದರು. ಈ ನೌಕರರನ್ನು ಮರು ನೇಮಕ ಮಾಡಿಕೊಳ್ಳುವಂತೆ ಅವರು ಆಗ್ರಹಿಸಿದರು.
ಕಾರ್ಮಿಕರ ಪರವಾಗಿ ನಿಂತಿರುವ ಶರ್ಮಿಳಾ ಅವರು ಅನಿರ್ದಿಷ್ಟಾವಧಿ ಸತ್ಯಾಗ್ರಹ ಆರಂಭಿಸಿದರು ಎಂದು ಕಾಂಗ್ರೆಸ್ ಪ್ರಕಟನೆಯಲ್ಲಿ ತಿಳಿಸಿದೆ.
ತಕ್ಷಣವೇ ಕಾರ್ಮಿಕರಿಗೆ ಉದ್ಯೋಗ ನೀಡುವಂತೆ ಒತ್ತಾಯಿಸಿದರು. ಈ ವೇಳೆ ಕಾಂಗ್ರೆಸ್ ನಾಯಕರು ಮತ್ತು ಪಕ್ಷದ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.