ADVERTISEMENT

ಬಾಲಕಿಯ ಮೇಲೆ ಅತ್ಯಾಚಾರ; ಕೊಲೆ ಪ್ರಕರಣ: ಅಪರಾಧಿಗೆ ಮರಣದಂಡನೆ 

ಪಿಟಿಐ
Published 14 ಆಗಸ್ಟ್ 2025, 12:14 IST
Last Updated 14 ಆಗಸ್ಟ್ 2025, 12:14 IST
   

ಹೈದರಬಾದ್ : ತೆಲಂಗಾಣದ ನಲ್ಗೊಂಡ ಜಿಲ್ಲೆಯಲ್ಲಿ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ ಅರೋಪದಡಿ ಪೋಕ್ಸೊ ನ್ಯಾಯಾಲಯವು ಆರೋಪಿಗೆ ಮರಣದಂಡನೆಯನ್ನು ವಿಧಿಸಿ ಆದೇಶವನ್ನು ನೀಡಿದೆ. 

ತೆಲಂಗಾಣದ ವಿಶೇಷ ಪೋಕ್ಸೊ ನ್ಯಾಯಾಲಯವು ಪ್ರಕರಣಕ್ಕೆ ಸಂಬಂಧಿಸಿದ ಸಾಕ್ಷ್ಯಾಧಾರಗಳನ್ನು ಕೂಲಂಕಶವಾಗಿ ಪರಿಶೀಲಿಸಿ ಆಪರಾಧಿ ಎಂದು ಪರಿಗಣಿಸಿದೆ. ಅಪರಾಧಿಗೆ ₹10 ಲಕ್ಷ ದಂಡ ಹಾಗೂ ಮರಣದಂಡನೆ ಶಿಕ್ಷೆಯನ್ನು ವಿಧಿಸಲಾಗಿದೆ ಎಂದು ನಲ್ಗೊಂಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶರತ್ ಚಂದ್ರ ಪವಾರ್ ಹೇಳಿದ್ದಾರೆ. 

ಬಾಲಕಿಯ ಕುಟುಂಬ ವಾಸವಾಗಿದ್ದ ಕಾಲೋನಿಯಲ್ಲೇ ಅಪರಾಧಿಯು ವಾಸವಾಗಿದ್ದನು. ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಮೇಲೆ ಕತ್ತು ಹಿಸುಕಿ ಈತ ಕೊಂದೊದ್ದ. ನಂತರ ದೇಹವನ್ನು ಒಳಚರಂಡಿಗೆ ಎಸೆದಿದ್ದಾನೆ ಎಂದು ನ್ಯಾಯಾಲಯದ ತೀರ್ಪಿನಲ್ಲಿ ಉಲ್ಲೇಖಿಸಲಾಗಿದೆ. 

ADVERTISEMENT

ವಿಚಾರಣೆಯ ಸಂದರ್ಭದಲ್ಲಿ ಅಪರಾಧಿಗೆ ಕಿವಿ ಕೇಳದ ಹಾಗೂ ಮಾತು ಬಾರದ ಕಾರಣ ಭಾಷಾಂತರಕಾರರನ್ನು ನ್ಯಾಯಾಲಯವು ನೇಮಿಸಿತ್ತು. 

ಬಾಲಕಿಯ ಕುಟುಂಬದವರು ನೀಡಿದ ದೂರಿನ ಆಧಾರದ ಮೇಲೆ ನಾಪತ್ತೆ ಪ್ರಕರಣವನ್ನು ದಾಖಲಿಸಿಕೊಂಡು ಪೊಲೀಸರು ತನಿಖೆ ಆರಂಭಿಸಿ ಆರೋಪಿಯನ್ನು ಬಂಧಿಸಲಾಗಿತ್ತು. ನಂತರ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು ಎಂದು ಪೊಲೀಸ್‌ ಮೂಲಗಳು ಅಧಿಕೃತವಾಗಿ ತಿಳಿಸಿವೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.