ADVERTISEMENT

ಉಗ್ರರ ದಾಳಿ | ಪೊಲೀಸ್‌ ಕಾನ್‌ಸ್ಟೆಬಲ್‌ ಸಾವು; ಮಗಳಿಗೆ ಗಾಯ

​ಪ್ರಜಾವಾಣಿ ವಾರ್ತೆ
Published 24 ಮೇ 2022, 18:14 IST
Last Updated 24 ಮೇ 2022, 18:14 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಶ್ರೀನಗರ: ಇಲ್ಲಿನ ಹೊರವಲಯದ ಸೌರಾ ನಗರದ ಅಂಚಾರ ಪ್ರದೇಶದಲ್ಲಿ ಮಂಗಳವಾರ ಉಗ್ರರು ನಡೆಸಿದ ಗುಂಡಿನ ದಾಳಿಗೆ ಪೊಲೀಸ್ ಕಾನ್‌ಸ್ಟೆಬಲ್‌ವೊಬ್ಬರು ಮೃತಪಟ್ಟಿದ್ದು,ಅವರ ಮಗಳು ಗಾಯಗೊಂಡಿದ್ದಾರೆ.

ಸೈಫುಲ್ಲಾ ಖಾದ್ರಿ ಹುತಾತ್ಮರಾದ ಕಾನ್‌ಸ್ಟೆಬಲ್‌. ‘ಕಾನ್‌ಸ್ಟೆಬಲ್‌ ಸೈಫುಲ್ಲಾ ಖಾದ್ರಿ ಅವರು ತಮ್ಮ ಮಗಳನ್ನು ಟ್ಯೂಷನ್‌ಗೆ ಕರೆದೊಯ್ಯುತ್ತಿದ್ದ ವೇಳೆ ಅವರ ಮನೆಯ ಸಮೀಪದಲ್ಲೇ ಉಗ್ರರು ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ. ದಾಳಿಯಲ್ಲಿ ಗಾಯಗೊಂಡ ಇಬ್ಬರನ್ನೂ ಸ್ಕಿಮ್ಸ್‌ ಆಸ್ಪತ್ರೆಗೆ ಸೇರಿಸಲಾಯಿತು. ಚಿಕಿತ್ಸೆಗೆ ಸ್ಪಂದಿಸದೇ ಸೈಫುಲ್ಲಾ ಖಾದ್ರಿ ಆಸ್ಪತ್ರೆಯಲ್ಲಿ ಮೃತಪಟ್ಟರು. ಅವರ ಏಳು ವರ್ಷದ ಮಗಳ ಬಲಗೈಗೆ ಗುಂಡೇಟು ತಗುಲಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ’ ಎಂದು ಪೊಲೀಸ್‌ ಅಧಿಕಾರಿಯೊಬ್ಬರು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT