ADVERTISEMENT

ಛತ್ತೀಸಗಢ | ಎನ್‌ಕೌಂಟರ್‌ನಲ್ಲಿ ಓರ್ವ ಪೊಲೀಸ್ ಸಿಬ್ಬಂದಿ, ನಕ್ಸಲ್ ಮೃತ

ಪಿಟಿಐ
Published 3 ಮಾರ್ಚ್ 2024, 6:47 IST
Last Updated 3 ಮಾರ್ಚ್ 2024, 6:47 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ಕಾನ್‌ಕೇರ್‌: ಛತ್ತೀಸಗಢದ ಕಾನ್‌ಕೇರ್‌ ಜಿಲ್ಲೆಯಲ್ಲಿ ಭಾನುವಾರ ನಡೆದ ಎನ್‌ಕೌಂಟರ್‌ನಲ್ಲಿ ಓರ್ವ ಪೊಲೀಸ್‌ ಕಾನ್‌ಸ್ಟೇಬಲ್ ಹಾಗೂ ಒಬ್ಬ ನಕ್ಸಲ್ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಛೋಟೇಬೆತಿಯಾ ಪೊಲೀಸ್ ಠಾಣೆ ವ್ಯಾಪ್ತಿಯ ಹಿದೂರ್‌ ಗ್ರಾಮದ ಅರಣ್ಯದಲ್ಲಿ ನಕ್ಸಲ್ ನಿಗ್ರಹ ಆಪರೇಷನ್ ವೇಳೆ ಗುಂಡಿನ ಕಾಳಗ ನಡೆದಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ADVERTISEMENT

ಹಿದೂರ್ ಕಾಡಿನಲ್ಲಿ ನಕ್ಸಲರು ಇರುವ ಬಗ್ಗೆ ಖಚಿತ ಮಾಹಿತಿ ಪಡೆದು ಕಾರ್ಯಾಚರಣೆ ನಡೆಸಲಾಗಿದೆ. ರಾಜ್ಯ ಪೊಲೀಸ್‌ನ ಬಾಸ್ಟರ್‌ ಫೈಟರ್‌ ವಿಭಾಗಕ್ಕೆ ಸೇರಿದ ಕಾನ್‌ಸ್ಟೇಬಲ್ ರಮೇಶ್ ಕುರೇತಿ ಅವರು ಎನ್‌ಕೌಂಟರ್‌ನಲ್ಲಿ ಮೃತಪಟ್ಟಿದ್ದಾರೆ.

‌ಸ್ಥಳದಲ್ಲಿ ಓರ್ವ ನಕ್ಸಲ್‌ನ ಮೃತದೇಹ ಹಾಗೂ ಎಕೆ–47 ಗನ್ ಅನ್ನು ವಶಕ್ಕೆ ಪಡೆಯಲಾಗಿದೆ. ಶೋಧ ಮುಂದುವರಿದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.