
ಪ್ರಜಾವಾಣಿ ವಾರ್ತೆ
ಪಟ್ನಾ: ಗುಂಪುಹಲ್ಲೆ–ಹತ್ಯೆಯನ್ನು ನಿಲ್ಲಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬಹಿರಂಗಪತ್ರ ಬರೆದಿದ್ದ 49 ಗಣ್ಯರ ವಿರುದ್ಧ ದಾಖಲಾಗಿದ್ದ ದೇಶದ್ರೋಹ ಪ್ರಕರಣವನ್ನು ಬಿಹಾರ ಪೊಲೀಸರು ಕೈಬಿಟ್ಟಿದ್ದಾರೆ.
‘ದುರುದ್ದೇಶದಿಂದ ಗಣ್ಯರ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು. ಅವರ ವಿರುದ್ಧದ ಆರೋಪಗಳಿಗೆ ಯಾವುದೇ ಆಧಾರಗಳಿಲ್ಲ ಎಂಬುದು ತನಿಖೆ ವೇಳೆ ತಿಳಿಯಿತು. ಹೀಗಾಗಿ ಪ್ರಕರಣವನ್ನು ರದ್ದು ಮಾಡುವಂತೆ ಆದೇಶಿಸಿದ್ದೇನೆ’ ಎಂದುಪೊಲೀಸರು ಹೇಳಿದ್ದಾರೆ.
‘ಗಣ್ಯರು ಬರೆದ ಪತ್ರದಿಂದ ದೇಶದ ಘನತೆಗೆ ಧಕ್ಕೆಯಾಗಿದೆ. ಇವರ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸಬೇಕು’ ಎಂದುಮುಜಪ್ಫರಪುರದ ವಕೀಲರೊಬ್ಬರು ಅಲ್ಲಿನ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಮೊರೆ ಹೋಗಿದ್ದರು. ಪತ್ರ ಬರೆದವರ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ನ್ಯಾಯಾಲಯ ಪೊಲೀಸರಿಗೆ ಆದೇಶಿಸಿತ್ತು. ಇದಕ್ಕೆ ದೇಶದಾದ್ಯಂತ ಆಕ್ರೋಶ ವ್ಯಕ್ತವಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.