ADVERTISEMENT

ಬೂಸ್ಟರ್‌ ಡೋಸ್‌: ಕೊರ್ಬೆವ್ಯಾಕ್ಸ್‌ಗೆ ಅನುಮತಿ

ಪಿಟಿಐ
Published 4 ಜೂನ್ 2022, 19:31 IST
Last Updated 4 ಜೂನ್ 2022, 19:31 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಹೈದರಾಬಾದ್: ಬಯಾಲಾಜಿಕಲ್–ಇ ಸಂಸ್ಥೆ ಅಭಿವೃದ್ಧಿಪಡಿಸಿರುವ ಕೊರ್ಬೆವ್ಯಾಕ್ಸ್ ಲಸಿಕೆಯನ್ನು ಬೂಸ್ಟರ್ ಡೋಸ್ ಆಗಿ ಬಳಕೆ ಮಾಡಲು ಭಾರತೀಯ ಔಷಧ ಮಹಾ ನಿಯಂತ್ರಕರು (ಡಿಸಿಜಿಐ) ಅನುಮತಿ ನೀಡಿದ್ದಾರೆ ಎಂದು ಸಂಸ್ಥೆ ಶನಿವಾರ ತಿಳಿಸಿದೆ.

ಕೋವಿಶೀಲ್ಡ್ ಅಥವಾ ಕೋವ್ಯಾಕ್ಸಿನ್ ಲಸಿಕೆಯ ಮೊದಲ ಎರಡು ಡೋಸ್‌ಗಳನ್ನು ಪಡೆದಿರುವ ವ್ಯಕ್ತಿಗಳಿಗೆ ಮೂರನೇ ಡೋಸ್ ಆಗಿ ಕೊರ್ಬೆವ್ಯಾಕ್ಸ್ ಲಸಿಕೆಯನ್ನು ನೀಡಬಹುದು ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ. ಬೇರೆ ಕಂಪನಿಗಳ ಮೊದಲ ಎರಡು ಡೋಸ್‌ ಲಸಿಕೆಗಳನ್ನು ಪಡೆದಿರುವ ವ್ಯಕ್ತಿಗೆ ಮತ್ತೊಂದು ಕಂಪನಿಯ ಲಸಿಕೆಯನ್ನು ಬೂಸ್ಟರ್ ಡೋಸ್ ಆಗಿ ಬಳಸಲು ಅನುಮತಿ ಸಿಕ್ಕಿರುವುದು ಭಾರತದಲ್ಲಿ ಇದೇ ಮೊದಲು ಎಂದು ಸಂಸ್ಥೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT