ADVERTISEMENT

ಕೊರೊನಾ ಎಫೆಕ್ಟ್ : ವಿದೇಶಿ ವಿಮಾನಗಳಿಗೆ ಭಾರತದಲ್ಲಿ ಲ್ಯಾಂಡ್ ಆಗಲು ನಿರ್ಬಂಧ

​ಪ್ರಜಾವಾಣಿ ವಾರ್ತೆ
Published 19 ಮಾರ್ಚ್ 2020, 12:27 IST
Last Updated 19 ಮಾರ್ಚ್ 2020, 12:27 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ:ಕೊರೊನಾ ಸೋಂಕು ಕಾರಣ ಭಾರತದ ವಿಮಾನ ನಿಲ್ದಾಣಗಳಲ್ಲಿವಿದೇಶಿ ವಿಮಾನಗಳಿಗೆ ಲ್ಯಾಂಡ್ ಆಗಲು ನಿರ್ಬಂಧ ವಿಧಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.

ಕೊರೊನಾ ಸೋಂಕು ಹೆಚ್ಚಿನ ಸಂಖ್ಯೆಯಲ್ಲಿ ವಿದೇಶಗಳಿಂದ ಭಾರತಕ್ಕೆ ಬಂದ ಪ್ರಜೆಗಳು ಹಾಗೂ ಭಾರತಕ್ಕೆ ಬಂದ ವಿದೇಶಿಯರಲ್ಲಿ ಕಂಡು ಬಂದ ಹಿನ್ನೆಲೆಯಲ್ಲಿಈ ಕ್ರಮ ಕೈಗೊಳ್ಳಲಾಗಿದೆ.

ಮಾರ್ಚ್ 22ರಿಂದ ಈ ಆದೇಶ ಜಾರಿಗೆ ಬರಲಿದ್ದು, ಇದರಿಂದಾಗಿ ಅನೇಕ ಮಂದಿ ಭಾರತೀಯರು ಮಾರ್ಚ್ 22ರ ಒಳಗೆ ಭಾರತಕ್ಕೆ ಬರಲು ಹಾತೊರೆಯುತ್ತಿದ್ದಾರೆ.ಕೊರೊನಾ ಸೋಂಕು ಭಾರತದಲ್ಲಿ ತೀವ್ರ ಗತಿಯಲ್ಲಿ ಹರಡುತ್ತಿರುವುದು ಈ ಕ್ರಮ ಕೈಗೊಳ್ಳಲಾಗಿದೆ.

ADVERTISEMENT

10 ವರ್ಷದೊಳಗೆ ಮಕ್ಕಳ ಪ್ರಯಾಣ ಬೇಡ

ಇನ್ನೊಂದೆಡೆ10 ವರ್ಷದೊಳಗಿನ ಮಕ್ಕಳು ಮನೆಯಲ್ಲಿಯೇ ಇರಲಿ, ಮಕ್ಕಳು ವಿಮಾನ ಹಾಗೂ ರೈಲುಗಳಲ್ಲಿ ಪ್ರಯಾಣಿಸುವುದರ ಬದಲು ಮನೆಯಲ್ಲಿರುವಂತೆ ಕ್ರಮ ಕೈಗೊಳ್ಳಬೇಕು. ಹಾಗೂ 65 ವರ್ಷ ಮೇಲ್ಪಟ್ಟ ವ್ಯಕ್ತಿಗಳು ಮನೆಯಲ್ಲಿಯೇ ಇರುವಂತೆಎಲ್ಲಾ ರಾಜ್ಯಗಳು ಕ್ರಮ ಕೈಗೊಳ್ಳಬೇಕೆಂದು ಕೇಂದ್ರ ಸರ್ಕಾರನಿರ್ದೇಶನ ನೀಡಿದೆ.

ರಾಜಕಾರಣಿಗಳು, ಸರ್ಕಾರಿ ಸೇವೆಯಲ್ಲಿರುವವರು, ವೈದ್ಯಕೀಯ ಕ್ಷೇತ್ರದಲ್ಲಿರುವವರನ್ನು ಹೊರತು ಪಡಿಸಿ ಉಳಿದವರು ಮನೆಯಿಂದಲೇ ಕೆಲಸ ನಿರ್ವಹಿಸುವಂತೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಕೇಂದ್ರ ಆರೋಗ್ಯ ಇಲಾಖೆಸೂಚಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.