ADVERTISEMENT

ಕಾಲ್ನಡಿಗೆ ನಿಲ್ಲಿಸಿ, ನಿಮ್ಮ ಕಾಳಜಿ ನಮಗಿದೆ: ಕಾರ್ಮಿಕರಿಗೆ ಕೇಜ್ರಿವಾಲ್‌ ಮನವಿ

​ಪ್ರಜಾವಾಣಿ ವಾರ್ತೆ
Published 10 ಮೇ 2020, 7:56 IST
Last Updated 10 ಮೇ 2020, 7:56 IST
ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌
ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌    

ನವದೆಹಲಿ: ವಲಸೆ ಕಾರ್ಮಿಕರಿಗಾಗಿಹೆಚ್ಚಿನ ರೈಲುಗಳ ವ್ಯವಸ್ಥೆ ಮಾಡುತ್ತಿದ್ದೇವೆ. ಕಾಲ್ನಡಿಗೆಯಲ್ಲಿ ಪ್ರಯಾಣಿಸದಂತೆ ನಾನು ಅವರಿಗೆ ಮನವಿ ಮಾಡುತ್ತೇನೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದಕೇಜ್ರಿವಾಲ್‌ ಕೇಳಿಕೊಂಡಿದ್ದಾರೆ.

ದೆಹಲಿಯಲ್ಲಿ ಭಾನುವಾರ ಮಾತನಾಡಿರುವ ಅವರು, 'ವಲಸಿಗರಿಗಾಗಿ ಹೆಚ್ಚಿನ ರೈಲುಗಳವ್ಯವಸ್ಥೆ ಮಾಡುತ್ತಿದ್ದೇವೆ. ಕಾಲ್ನಡಿಗೆಯಲ್ಲಿ ಪ್ರಯಾಣಿಸದಂತೆ ನಾನು ಅವರಿಗೆ ಮನವಿ ಮಾಡುತ್ತೇನೆ. ಇದು ಸುರಕ್ಷಿತವಲ್ಲ. ನಿಮ್ಮ ಜವಾಬ್ದಾರಿಯನ್ನು ನಾವು ತೆಗೆದುಕೊಳ್ಳುತ್ತೇವೆ. ನಿಮ್ಮ ಬಗ್ಗೆ ಕಾಳಜಿ ವಹಿಸಲು ನಾವು ಇಲ್ಲಿದ್ದೇವೆ' ಎಂದು ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಕೇಳಿಕೊಂಡಿದ್ದಾರೆ.

ಇದೇ ವೇಳೆ, ದೆಹಲಿಯಲ್ಲಿ ಕೊರೊನಾ ಸೋಂಕಿನ ಸ್ಥಿತಿಗತಿಗಳ ಬಗ್ಗೆ ತಿಳಿಸಿರುವ ಕೇಜ್ರಿವಾಲ್‌, 'ದೆಹಲಿಯ ಒಟ್ಟು 7000 ಕೊರೊನಾ ಸೋಂಕಿತರಲ್ಲಿ, ಸುಮಾರು 1500 ಸೋಂಕಿತರು ಆಸ್ಪತ್ರೆಯಲ್ಲಿದ್ದಾರೆ. ಆಸ್ಪತ್ರೆಯಲ್ಲಿರುವ 1500 ಜನರಲ್ಲಿ 27 ಮಂದಿ ಮಾತ್ರ ವೆಂಟಿಲೇಟರ್‌ನಲ್ಲಿದ್ದಾರೆ. ಹೆಚ್ಚಿನ ಪ್ರಕರಣಗಳು ಸಕಾರಾತ್ಮಕವಾಗಿವೆ' ಎಂದಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.