ADVERTISEMENT

ಒಡಿಶಾ: 120 ಕೈದಿಗಳಲ್ಲಿ ಕೋವಿಡ್ ಸೋಂಕು ದೃಢ

ಏಜೆನ್ಸೀಸ್
Published 14 ಮೇ 2021, 3:54 IST
Last Updated 14 ಮೇ 2021, 3:54 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಭುವನೇಶ್ವರ: ಒಡಿಶಾದಲ್ಲಿ 120 ಕೈದಿಗಳಿಗೆ ಕೋವಿಡ್-19 ದೃಢಗೊಂಡಿದ್ದು, ಕನಿಷ್ಠ ಇಬ್ಬರು ಮೃತಪಟ್ಟಿದ್ದಾರೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಈ ಕುರಿತು ಸುದ್ದಿಗಾರರಿಗೆ ಮಾಹಿತಿ ನೀಡಿರುವ ಡಿಐಜಿ (ಕಾರಾಗೃಹ) ಶುಭಕಾಂತ ಮಿಶ್ರಾ, ಗಂಭೀರ ರೋಗಿಗಳನ್ನು ಕೋವಿಡ್ ಆಸ್ಪತ್ರೆಗಳಿಗೆ ವರ್ಗಾಯಿಸಲಾಗಿದ್ದು, 449 ಅಪರಾಧಿಗಳನ್ನು 90 ದಿನಗಳ ಪೆರೋಲ್‌ನಲ್ಲಿ ಬಿಡುಗಡೆ ಮಾಡಲಾಗಿದೆ ಎಂದು ಹೇಳಿದ್ದಾರೆ.

ಕೊರೊನಾವೈರಸ್ ಹರಡುವುದನ್ನು ನಿಯಂತ್ರಿಸುವ ಸಲುವಾಗಿ ಪಾಟ್ನಾಗಡ ಸಬ್ ಜೈಲು ಮತ್ತು ಬೆರ್ಹಾಂಪುರ ಜೈಲಿನಲ್ಲಿ ಕೋವಿಡ್ ಚಿಕಿತ್ಸಾ ಕೇಂದ್ರ ತೆರೆಯಲಾಗಿದೆ ಎಂದು ಹೇಳಿದ್ದಾರೆ.

ಒಡಿಶಾದಲ್ಲಿ ಇದುವರೆಗೆ 5.5 ಲಕ್ಷಕ್ಕೂ ಹೆಚ್ಚು ಮಂದಿಯಲ್ಲಿ ಕೋವಿಡ್ ಸೋಂಕು ದೃಢಗೊಂಡಿದ್ದು, 2,000ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ.

ರಾಜ್ಯದಲ್ಲಿ 1,00,313 ಸಕ್ರಿಯ ಪ್ರಕರಣಗಳಿದ್ದು, 4.5 ಲಕ್ಷಕ್ಕೂ ಹೆಚ್ಚು ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.