ನವದೆಹಲಿ: ಕೊರೊನಾ ವಿರುದ್ಧ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಜಮ್ಮುವಿನ ಅವಳಿ ಬಾಲಕಿಯರಾದ ಸಾಯಿಬಾ ಮತ್ತು ಸಾಯಿಷಾ ಗುಪ್ತಾ ಕಂಪೋಸ್ ಮಾಡಿರುವ ವಿಡಿಯೊ ಹಾಡಿಗೆ ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
‘ಸಾಯಿಬಾ ಮತ್ತು ಸಾಯಿಷಾ ಗುಪ್ತಾರಂತಹವರ ಬಗ್ಗೆ ಹೆಮ್ಮೆ ಎನಿಸುತ್ತಿದೆ. ಕೊರೊನಾ ವೈರಸ್ ಅನ್ನು ಸೋಲಿಸುವ ನಿಟ್ಟಿನಲ್ಲಿ ಅವರು ಜಾಗೃತಿ ಮೂಡಿಸುತ್ತಿದ್ದಾರೆ. ಒಮ್ಮೆ ಈ ವಿಡಿಯೊ ನೋಡಿ’ ಎಂದು ಅವರು ವಿಡಿಯೊ ಸಹಿತ ಟ್ವೀಟ್ ಮಾಡಿದ್ದಾರೆ
ಕೊರೊನಾ ಹರಡದಂತೆ ತಡೆಯುವ ನಿಟ್ಟಿನಲ್ಲಿ ಅಂತರ ಕಾಯ್ದುಕೊಳ್ಳುವಿಕೆಯ ಮಹತ್ವವನ್ನು ವಿಡಿಯೊ ಹಾಡಿನಲ್ಲಿ ತೋರಿಸಲಾಗಿದೆ. ಲಾಕ್‌ಡೌನ್ ನಿಯಮಗಳಿಗೆ ಬದ್ಧರಾಗಿರುವಂತೆಯೂ ಅಂತರ ಕಾಯ್ದುಕೊಳ್ಳುವಂತೆಯೂ ಜನರಲ್ಲಿ ಸಹೋದರಿಯರು ಮನವಿ ಮಾಡಿದ್ದಾರೆ.
ಈ ವಿಡಿಯೊ ಹಾಡು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.