ADVERTISEMENT

ಮಹಾರಾಷ್ಟ್ರ: ಕೊರೊನಾ ವೈರಸ್‌ ಶಂಕಿತ ವೃದ್ಧ ಸಾವು

ಪಿಟಿಐ
Published 14 ಮಾರ್ಚ್ 2020, 21:10 IST
Last Updated 14 ಮಾರ್ಚ್ 2020, 21:10 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನಾಗಪುರ: ಮಹಾರಾಷ್ಟ್ರದಲ್ಲಿ ಕೊರೊನಾ ವೈರಸ್‌ ಶಂಕಿತ 71 ವರ್ಷದ ವೃದ್ಧರೊಬ್ಬರು ಮೃತಪಟ್ಟಿದ್ದಾರೆ.

ಸೌದಿ ಅರೇಬಿಯಾದಿಂದ ಹಿಂತಿರುಗಿದ್ದ ಇವರನ್ನು ಮಧುಮೇಹ ಮತ್ತು ರಕ್ತದೊತ್ತಡದ ಕಾರಣಕ್ಕೆ ಖಾಸಗಿ ಆಸ್ಪತ್ರೆಗೆ ಕೆಲ ದಿನಗಳ ಹಿಂದೆ ದಾಖಲು ಮಾಡಲಾಗಿತ್ತು. ಆದರೆ, ಕೊರೊನಾ ವೈರಸ್‌ ಲಕ್ಷಣಗಳು ಕಾಣಿಸಿಕೊಂಡಿದ್ದರಿಂದ ಬುಲದಾಣ ನಗರದ ಸಾರ್ವಜನಿಕ ಆಸ್ಪತ್ರೆಗೆ ಶನಿವಾರ ಬೆಳಿಗ್ಗೆ ದಾಖಲು ಮಾಡಲಾಗಿತ್ತು. ಮಧ್ಯಾಹ್ನ 4.20ಕ್ಕೆ ನಿಧನರಾದರು.

ಈ ವೃದ್ಧರಿಂದ ಸಂಗ್ರಹಿಸಲಾಗಿದ್ದ ಮಾದರಿಗಳನ್ನು ಪ್ರಯೋಗಲಾಯಕ್ಕೆ ಕಳುಹಿಸಲಾಗಿದ್ದು, ವರದಿಗೆ ಕಾಯಲಾಗುತ್ತಿದೆ ಎಂದು ಜಿಲ್ಲಾ ಶಸ್ತ್ರಚಿಕಿತ್ಸಕ ಪ್ರೇಮಚಂದ್‌ ಪಂಡಿತ್‌ ತಿಳಿಸಿದ್ದಾರೆ. ಇದುವರೆಗೆ ದೇಶದಲ್ಲಿ ಕೋವಿಡ್‌ 19 ದೃಢಪಟ್ಟಿದ್ದ ಇಬ್ಬರು ಮೃತಪಟ್ಟಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.