ADVERTISEMENT

Covid-19 India Update | 13 ಲಕ್ಷದ ಗಡಿ ದಾಟಿದ ಸೋಂಕಿತರ ಸಂಖ್ಯೆ

48,916 ಹೊಸ ಪ್ರಕರಣ, 757 ಮಂದಿ ಸಾವು

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 25 ಜುಲೈ 2020, 4:42 IST
Last Updated 25 ಜುಲೈ 2020, 4:42 IST
ಕೊರೊನಾ ವೈರಸ್‌ ಸೋಂಕು–ಪ್ರಾತಿನಿಧಿಕ ಚಿತ್ರ
ಕೊರೊನಾ ವೈರಸ್‌ ಸೋಂಕು–ಪ್ರಾತಿನಿಧಿಕ ಚಿತ್ರ   

ನವದೆಹಲಿ: ದೇಶದಾದ್ಯಂತ ಕಳೆದ 24 ಗಂಟೆಗಳ ಅವಧಿಯಲ್ಲಿ 49,916 ಕೋವಿಡ್‌ ದೃಢಪಟ್ಟ ಹೊಸ ಪ್ರಕರಣಗಳು ದಾಖಲಾಗಿದ್ದು, 757 ಮಂದಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.

ಇದರೊಂದಿಗೆ ದೇಶದಲ್ಲಿ ಸೋಂಕಿತರ ಸಂಖ್ಯೆ13,36,861ಕ್ಕೆ ಏರಿಕೆಯಾಗಿದ್ದು, 31,358 ಮಂದಿ ಸಾವಿಗೀಡಾಗಿದ್ದಾರೆ.

ಇದುವರೆಗೆ 8,49,431 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸದ್ಯ ದೇಶದಲ್ಲಿ 4,56,071 ಸಕ್ರಿಯ ಪ್ರಕರಣಗಳು ಇವೆ.

ADVERTISEMENT

ದೇಶದಲ್ಲಿ ಅತಿ ಹೆಚ್ಚು ಸೋಂಕಿರನ್ನು ಹೊಂದಿರುವ ಮಹಾರಾಷ್ಟ್ರದಲ್ಲಿ 3.48 ಲಕ್ಷ ಮಂದಿಗೆ ಸೋಂಕು ತಗುಲಿದ್ದು, 12,854 ಮಂದಿ ಮೃತಪಟ್ಟಿದ್ದಾರೆ. ತಮಿಳುನಾಡಿನಲ್ಲಿ 2.0 ಲಕ್ಷ ಮಂದಿಗೆ ಸೋಂಕು ದೃಢಪಟ್ಟಿದ್ದು, ಇದುವರೆಗೆ 3,320 ಮಂದಿ ಸಾವಿಗೀಡಾಗಿದ್ದಾರೆ.
ರಾಜಧಾನಿ ದೆಹಲಿಯಲ್ಲಿ 1.2 ಲಕ್ಷ ಜನರಿಗೆ ಸೋಂಕು ತಗುಲಿದೆ. ಈವರೆಗೆ 3,745 ಮಂದಿ ಕೊನೆಯುಸಿರೆಳೆದಿದ್ದಾರೆ.

ಕರ್ನಾಟಕದಲ್ಲಿ ಶುಕ್ರವಾರ ಒಂದೇ ದಿನ 5,007 ಮಂದಿಗೆ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 85,870ಕ್ಕೆ ಏರಿಕೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.