ADVERTISEMENT

Covid-19 India Update: 16 ಸಾವಿರಕ್ಕೂ ಹೆಚ್ಚು ಹೊಸ ಪ್ರಕರಣ, 198 ಸಾವು

ಏಜೆನ್ಸೀಸ್
Published 14 ಜನವರಿ 2021, 5:07 IST
Last Updated 14 ಜನವರಿ 2021, 5:07 IST
ಕೊರೊನಾ ವೈರಸ್ ಸೋಂಕು ಪರೀಕ್ಷೆ (ಸಾಂದರ್ಭಿಕ ಚಿತ್ರ)
ಕೊರೊನಾ ವೈರಸ್ ಸೋಂಕು ಪರೀಕ್ಷೆ (ಸಾಂದರ್ಭಿಕ ಚಿತ್ರ)   

ನವದೆಹಲಿ: ದೇಶದಾದ್ಯಂತ 24 ಗಂಟೆಗಳಲ್ಲಿ 16,946 ಹೊಸ ಕೋವಿಡ್‌ ಪ್ರಕರಣಗಳು ದೃಢಪಟ್ಟಿದ್ದು, 198 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ದೇಶದಲ್ಲಿ ಇದುವರೆಗೆ 1,05,12,093 ಪ್ರಕರಣಗಳು ಪತ್ತೆಯಾಗಿವೆ. ಆ ಪೈಕಿ 1,51,727 ಮಂದಿ ಸಾವಿಗೀಡಾಗಿದ್ದಾರೆ.

ಕಳೆದ 24 ಗಂಟೆಗಳಲ್ಲಿ 17,652 ಸೋಂಕಿತರು ಚೇತರಿಸಿಕೊಂಡಿದ್ದು, ಈವರೆಗೆ ಗುಣಮುಖರಾದವರ ಸಂಖ್ಯೆ 1,01,46,763ಕ್ಕೆ ತಲುಪಿದೆ. ಸದ್ಯ 2,13,603 ಸಕ್ರಿಯ ಪ್ರಕರಣಗಳಿವೆ.

ADVERTISEMENT

ಈಗಾಗಲೇ ದೇಶದಾದ್ಯಂತ ಲಸಿಕೆ ಹಾಕುವ ಅಭಿಯಾನ ಆರಂಭವಾಗಿದ್ದು, ಮೊದಲ ಹಂತದಲ್ಲಿ ಕೊರೊನಾ ವಾರಿಯರ್ಸ್‌ಗಳಿಗೆ ಲಸಿಕೆ ಹಾಕಲಾಗುತ್ತದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.