ADVERTISEMENT

ಕೋವಿಡ್‌ | ಅತಿ ಹೆಚ್ಚು ಪ್ರಕರಣಗಳಿರುವ 7ನೇ ದೇಶ ಭಾರತ, ಒಂದೇ ದಿನ 7512 ಪ್ರಕರಣ

​ಪ್ರಜಾವಾಣಿ ವಾರ್ತೆ
Published 2 ಜೂನ್ 2020, 2:15 IST
Last Updated 2 ಜೂನ್ 2020, 2:15 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   
""
""
""

ನವದೆಹಲಿ: ಭಾರತದಲ್ಲಿ ಕೋವಿಡ್‌ ದೃಢಪಟ್ಟ ಪ್ರಕರಣಗಳು ಸೋಮವಾರ 1,92,174ಕ್ಕೆ ಏರಿದೆ. ಇದರೊಂದಿಗೆ ಜಗತ್ತಿನಲ್ಲಿ ಅತಿ ಹೆಚ್ಚು ಕೋವಿಡ್‌ ಪ್ರಕರಣಗಳಿರುವ ಏಳನೇ ದೇಶ ಎನಿಸಿಕೊಂಡಿದೆ.

ಈ ರೋಗದಿಂದ ಭಾನುವಾರ ರಾತ್ರಿಯಿಂದ ಸೋಮವಾರ ರಾತ್ರಿವರೆಗೆ 178 ಮಂದಿ ಮೃತಪಟ್ಟಿದ್ದಾರೆ. ಹೀಗಾಗಿ ಒಟ್ಟು ಸಾವಿನ ಸಂಖ್ಯೆ 5,501ಕ್ಕೆ ಏರಿದೆ.

ವಿಶ್ವ ಆರೋಗ್ಯ ಸಂಸ್ಥೆಯ ವರದಿ ಪ್ರಕಾರ, ಅತಿ ಹೆಚ್ಚು ಸಾವು ಸಂಭವಿಸಿದ ದೇಶಗಳಲ್ಲಿ ಭಾರತ 13ನೇ ಸ್ಥಾನದಲ್ಲಿದೆ. ಕೋವಿಡ್‌ ಬಾಧೆಯಿಂದ ಸಾವಿನ ಪ‍್ರಮಾಣವು ಭಾರತದಲ್ಲಿ ಶೇ 2.83ರಷ್ಟಿದೆ. ಸಾವಿನ ಪ್ರಮಾಣವು ಅತಿ ಕಡಿಮೆ ಇರುವ ದೇಶಗಳಲ್ಲಿ ಭಾರತವೂ ಇದೆ.

ADVERTISEMENT

ನಿರಂತರ ನಿಗಾ, ತ್ವರಿತವಾಗಿ ಸೋಂಕು ಪತ್ತೆ ಮತ್ತು ಚಿಕಿತ್ಸೆಯಿಂದಾಗಿ ದೇಶದಲ್ಲಿ ಸಾವಿನ ಪ್ರಮಾಣ ಕಡಿಮೆ ಇದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದೆ.ತಮಿಳುನಾಡಿನಲ್ಲಿ ಸೋಂಕಿತರ ಸಂಖ್ಯೆ ಹೆಚ್ಚುತ್ತಲೇ ಇದೆ. ಸತತ ಎರಡು ದಿನ ಇಲ್ಲಿ ಸಾವಿರಕ್ಕೂ ಹೆಚ್ಚು ಪ್ರಕರಣಗಳು ವರದಿಯಾಗಿವೆ. ಸೋಮವಾರ 1,162 ಪ್ರಕರಣಗಳು ದೃಢಪಟ್ಟಿವೆ. ಒಟ್ಟು ಸೋಂಕಿತರ ಸಂಖ್ಯೆ 23 ಸಾವಿರ ದಾಟಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.