ADVERTISEMENT

Covid-19 India Update: 45 ಲಕ್ಷ ದಾಟಿದ ಸೋಂಕಿತರ ಸಂಖ್ಯೆ

ಏಜೆನ್ಸೀಸ್
Published 11 ಸೆಪ್ಟೆಂಬರ್ 2020, 4:39 IST
Last Updated 11 ಸೆಪ್ಟೆಂಬರ್ 2020, 4:39 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ದೇಶದಾದ್ಯಂತ ಕಳೆದ 24 ಗಂಟೆಗಳ ಅವಧಿಯಲ್ಲಿ 96,551 ಹೊಸ ಕೋವಿಡ್‌ ಪ್ರಕರಣಗಳು ದೃಢಪಟ್ಟಿದ್ದು, 1,209 ಮಂದಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.

ಇದರೊಂದಿಗೆ ಒಟ್ಟು ಸೋಂಕಿತರು ಸಂಖ್ಯೆ 45,62,415ಕ್ಕೆ ಏರಿಕೆಯಾಗಿದೆ. ಈವರೆಗೆ 76,271 ಮಂದಿ ಸಾವಿಗೀಡಾಗಿದ್ದಾರೆ.

ಇದುವರೆಗೆ 35,42,664 ಮಂದಿ ಸೋಂಕಿತರು ಚೇತರಿಸಿಕೊಂಡು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸದ್ಯ 9,43,480 ಸಕ್ರಿಯ ಪ್ರಕರಣಗಳು ಇವೆ.

ADVERTISEMENT

ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದ್ದು, ಮಹಾರಾಷ್ಟ್ರದಲ್ಲಿ 9.67 ಲಕ್ಷ ಪ್ರಕರಣ ಪತ್ತೆಯಾಗಿದ್ದು, ಈವರೆಗೆ27,787 ಮಂದಿ ಮೃತಪಟ್ಟಿದ್ದಾರೆ.

ಆಂಧ್ರಪ್ರದೇಶದಲ್ಲಿ 5.38 ಲಕ್ಷ ಜನರಿಗೆ ಸೋಂಕು ದೃಢಪಟ್ಟಿದ್ದು, 4,702 ಮಂದಿ ಸಾವಿಗೀಡಾಗಿದ್ದಾರೆ. ಇತ್ತ ತಮಿಳುನಾಡಿನಲ್ಲಿ 4.81 ಲಕ್ಷ ಪ್ರಕರಣಗಳು ಪತ್ತೆಯಾಗಿದ್ದು, ಈವರೆಗೆ 8,090 ಮಂದಿ ಕೊನೆಯುಸಿರೆಳೆದಿದ್ದಾರೆ.

ಇತ್ತ ಕರ್ನಾಟಕದಲ್ಲಿ ಗುರುವಾರ 9,217 ಹೊಸ ಪ್ರಕರಣಗಳು ದಾಖಲಾಗಿದ್ದು, ಸೋಂಕಿತರ ಸಂಖ್ಯೆ 4,30,947ಕ್ಕೆ ಏರಿದೆ. ಆ ಪೈಕಿ 6,937 ಮಂದಿ ಮೃತಪಟ್ಟಿದ್ದಾರೆ.

ಸೆ.10ರ ವರೆಗೆ ಒಟ್ಟು 5,40,97,975 ಮಾದರಿಗಳನ್ನು ಪರೀಕ್ಷಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.