ADVERTISEMENT

Covid-19 India Update | ಇಂದು 48,661 ಪ್ರಕರಣ ಪತ್ತೆ, 705 ಸಾವು

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 26 ಜುಲೈ 2020, 4:56 IST
Last Updated 26 ಜುಲೈ 2020, 4:56 IST
ಸೋಂಕು ಪತ್ತೆ ಪರೀಕ್ಷೆಯ ಪ್ರಾತಿನಿಧಿಕ ಚಿತ್ರ
ಸೋಂಕು ಪತ್ತೆ ಪರೀಕ್ಷೆಯ ಪ್ರಾತಿನಿಧಿಕ ಚಿತ್ರ   

ನವದೆಹಲಿ: ದೇಶದಾದ್ಯಂತ ಕಳೆದ 24 ಗಂಟೆಗಳ ಅವಧಿಯಲ್ಲಿ 48,661 ಹೊಸ ಕೋವಿಡ್‌ ಪ್ರಕರಣಗಳು ದೃಢಪಟ್ಟಿದ್ದು,705 ಮಂದಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.

ಇದರೊಂದಿಗೆ ದೇಶದಲ್ಲಿ ಸೋಂಕಿತರ ಸಂಖ್ಯೆ 13,85,522 ಕ್ಕೆ ಏರಿಕೆಯಾಗಿದ್ದು, 32,063 ಮಂದಿ ಸಾವಿಗೀಡಾಗಿದ್ದಾರೆ.

ಇದುವರೆಗೆ 8,85,577 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸದ್ಯ ದೇಶದಲ್ಲಿ 4,67,882 ಸಕ್ರಿಯ ಪ್ರಕರಣಗಳು ಇವೆ.

ADVERTISEMENT

ದೇಶದಲ್ಲಿ ಅತಿ ಹೆಚ್ಚು ಸೋಂಕಿರನ್ನು ಹೊಂದಿರುವ ಮಹಾರಾಷ್ಟ್ರದಲ್ಲಿ 3.57 ಪ್ರಕರಣಗಳು ವರದಿಯಾಗಿದ್ದು,13,132 ಮಂದಿ ಮೃತಪಟ್ಟಿದ್ದಾರೆ. ತಮಿಳುನಾಡಿನಲ್ಲಿ 2.0 ಲಕ್ಷ ಮಂದಿಗೆ ಸೋಂಕು ದೃಢಪಟ್ಟಿದ್ದು, ಇದುವರೆಗೆ 3,320 ಮಂದಿ ಸಾವಿಗೀಡಾಗಿದ್ದಾರೆ.

ರಾಜಧಾನಿ ದೆಹಲಿಯಲ್ಲಿ 1.28 ಲಕ್ಷ ಜನರಿಗೆ ಸೋಂಕು ತಗುಲಿದೆ. ಈವರೆಗೆ 3,777 ಮಂದಿ ಕೊನೆಯುಸಿರೆಳೆದಿದ್ದಾರೆ.

ಕರ್ನಾಟಕದಲ್ಲಿ ಶನಿವಾರ ಒಂದೇ ದಿನ 5,072 ಮಂದಿಗೆ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 90,942ಕ್ಕೆ ಏರಿಕೆಯಾಗಿದೆ. ಇದುವರಗೆ1,796 ಮಂದಿ ಮೃತಪಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.