ADVERTISEMENT

ದೆಹಲಿಯ ಪ್ರತಿಷ್ಠಿತ ಏಮ್ಸ್‌ ಆಸ್ಪತ್ರೆಯ ವೈದ್ಯರಲ್ಲಿ ಕೊರೊನಾ ವೈರಸ್ ಸೋಂಕು ದೃಢ

​ಪ್ರಜಾವಾಣಿ ವಾರ್ತೆ
Published 3 ಏಪ್ರಿಲ್ 2020, 2:42 IST
Last Updated 3 ಏಪ್ರಿಲ್ 2020, 2:42 IST
   

ನವದೆಹಲಿ: ದೆಹಲಿಯ ಪ್ರತಿಷ್ಠಿತ ಅಖಿಲ ಭಾರತ ವೈದ್ಯ ವಿಜ್ಞಾನ ಸಂಸ್ಥೆಯ (ಏಮ್ಸ್‌) ಹಿರಿಯ ವೈದ್ಯರೊಬ್ಬರಲ್ಲಿ ಕೊರೊನಾ ಸೋಂಕು ಇರುವುದು ಗುರುವಾರ ದೃಢವಾಗಿದೆ.

ವೈದ್ಯರ ಪತ್ನಿಯು 9 ತಿಂಗಳ ಗರ್ಭಿಣಿಯಾಗಿದ್ದು, ಅವರಲ್ಲೂ ಕೊರೊನಾ ಸೋಂಕು ಪತ್ತೆಯಾಗಿದೆ ಎಂದು ಮೂಲಗಳು ತಿಳಿಸಿವೆ.

ಶರೀರ ವಿಜ್ಞಾನ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದ ವೈದ್ಯರು ಮತ್ತು ಅವರ ಪತ್ನಿಯನ್ನು ಪ್ರತ್ಯೇಕ ವಾರ್ಡ್‌ನಲ್ಲಿ ಇರಿಸಲಾಗಿದ್ದು, ಚಿಕೆತ್ಸೆ ನೀಡಲಾಗುತ್ತಿದೆ.

ADVERTISEMENT

ವೈದ್ಯರಿಗೆ ಯಾವ ಸಂದರ್ಭದಲ್ಲಿ ಸೋಂಕು ತಗುಲಿದೆ ಎಂದು ಈವರೆಗೂ ತಿಳಿದುಬಂದಿಲ್ಲ. ಅವರು ಹೊರ ದೇಶಗಳಿಗೆ ಪ್ರಯಾಣ ಮಾಡಿದ ಇತಿಹಾಸವಿಲ್ಲ ಎಂದು ಮೂಲಗಳು ಹೇಳಿವೆ.

ಸಫ್ದರ್‌ಜಂಗ್‌ ಆಸ್ಪತ್ರೆಯ ವೈದ್ಯರಲ್ಲೂ ಸೋಂಕು

ಕೇಂದ್ರ ಸರ್ಕಾರದ ಅಡಿಯಲ್ಲಿ ಬರುವ ದೆಹಲಿಯ ಸಫ್ದರ್‌ಜಂಗ್‌ ಆಸ್ಪತ್ರೆಯ ಇಬ್ಬರು ವೈದ್ಯರಲ್ಲಿ ಕೊರೊನಾ ವೈರಸ್‌ ಸೋಂಕು ಬುಧವಾರ ಪತ್ತೆಯಾಗಿತ್ತು.

ಕೋವಿಡ್‌-19 ಸೋಂಕಿತರಿಗೆ ಚಿಕಿತ್ಸೆ ನೀಡುವ ತಂಡದ ಸದಸ್ಯರಾಗಿರುವ ಸಫ್ದರ್‌ಜಂಗ್‌ ಆಸ್ಪತ್ರೆಯ ವೈದ್ಯರೊಬ್ಬರಿಗೆ ಕರ್ತವ್ಯದ ಸಮಯದಲ್ಲಿ ಈ ಸೋಂಕು ತಗುಲಿರುವುದು ದೃಢವಾಗಿತ್ತು.

ಕೊರೊನಾ ಸೋಂಕು ಪೀಡಿತ ಇನ್ನೊಬ್ಬ ಮಹಿಳಾ ವೈದ್ಯರು ಸಫ್ದರ್‌ಜಂಗ್‌ ಆಸ್ಪತ್ರೆಯಲ್ಲಿ ಅಭ್ಯಸಿಸುತ್ತಿದ್ದು, ವಿದೇಶಿ ಪ್ರಯಾಣದ ಹಿನ್ನೆಲೆ ಹೊಂದಿದ್ದಾರೆ ಎಂದು ತಿಳಿದುಬಂದಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.