ನವದೆಹಲಿ: ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 13,203 ಹೊಸ ಕೊರೊನಾ ಸೋಂಕು ಪ್ರಕರಣಗಳು ದಾಖಲಾಗಿದ್ದು, 131 ಸೋಂಕಿತರು ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ದೇಶದಲ್ಲಿ ಈವರೆಗೆ ಒಟ್ಟು 1,06,67,736 ಪ್ರಕರಣಗಳು ಬೆಳಕಿಗೆ ಬಂದಿದ್ದು, 1,53,470 ಮಂದಿ ಸಾವಿಗೀಡಾಗಿದ್ದಾರೆ.
1,03,30,084 ಸೋಂಕಿತರು ಗುಣಮುಖರಾಗಿದ್ದು, 1,84,182 ಸಕ್ರಿಯ ಪ್ರಕರಣಗಳಿವೆ. ಕಳೆದ 24 ಗಂಟೆಗಳಲ್ಲಿ 13,298 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ.
ಕೋವಿಡ್‌ನಿಂದ ಚೇತರಿಸಿಕೊಂಡವರ ಪ್ರಮಾಣ ಶೇ.96.83ಕ್ಕೆ ತಲುಪಿದ್ದು, ಶೇ. 1.73 ಸಕ್ರಿಯ ಪ್ರಕರಣಗಳಿವೆ. ಸೋಂಕಿನಿಂದ ಮೃತಪಟ್ಟವರ ಪ್ರಮಾಣ ಶೇ. 1.44 ಇದೆ.
ಈ ವರೆಗೆ 16,15,504 ಮಂದಿಗೆ ಕೋವಿಡ್ ಲಸಿಕೆ ನೀಡಲಾಗಿದೆ.
Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.