ADVERTISEMENT

ಕೊರೊನಾ ಸೋಂಕು: ದೇಶದಲ್ಲಿ 206 ಸಾವು, ಪ್ರಕರಣಗಳ ಸಂಖ್ಯೆ 6,761ಕ್ಕೆ ಏರಿಕೆ

​ಪ್ರಜಾವಾಣಿ ವಾರ್ತೆ
Published 10 ಏಪ್ರಿಲ್ 2020, 12:30 IST
Last Updated 10 ಏಪ್ರಿಲ್ 2020, 12:30 IST
   

ನವದೆಹಲಿ: ಭಾರತದಲ್ಲಿ ಕೊರೊನಾ ವೈರಸ್ ಸೋಂಕು ಪ್ರಕರಣಗಳ ಸಂಖ್ಯೆ 6,761 ಕ್ಕೆ ಏರಿದ್ದು, ಸಾವಿನ ಸಂಖ್ಯೆ 206 ಕ್ಕೆ ತಲುಪಿದೆ

ಈ ಬಗ್ಗೆ ಮಾಹಿತಿ ನೀಡಿರುವ ಕೇಂದ್ರ ಆರೋಗ್ಯ ಇಲಾಖೆ 6039 ಕೊರೊನಾ ಸೋಂಕು ಪ್ರಕರಣಗಳು ಸಕ್ರೀಯವಾಗಿದ್ದು, 515 ಜನರು ಸೋಂಕಿನಿಂದ ಮುಕ್ತಿ ಪಡೆದಿದ್ದಾರೆ ಎಂದು ತಿಳಿಸಿದೆ.

ಉತ್ತರ ಪ್ರದೇಶದಲ್ಲಿ 21 ಕೊರೊನಾ ಸೋಂಕಿಗೆ ಸಂಬಂಧಿತ ಹೊಸ ಪ್ರಕರಣಗಳು ಬೆಳಕಿಗೆ ಬಂದಿದ್ದು, ಇಲ್ಲಿಯವರೆಗೆ 421 ಪ್ರಕರಣಗಳು ಪತ್ತೆಯಾಗಿವೆ. 8671 ಜನರನ್ನು ಕ್ವಾರಂಟೈನ್‌ನಲ್ಲಿ ಇರಿಸಲಾಗಿದ್ದು, 459 ಜನರನ್ನು ಪ್ರತ್ಯೇಕ ವಾರ್ಡ್‌ಗಳಿಗೆ ದಾಖಲಿಸಲಾಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ADVERTISEMENT

ಮಹಾರಾಷ್ಟ್ರದಲ್ಲಿ 1385 ಪ್ರಕರಣಗಳು ಕಂಡುಬಂದಿದ್ದು, 98 ಜನರು ಬಲಿಯಾಗಿದ್ದಾರೆ.

ತಮಿಳುನಾಡಿನಲ್ಲಿ 8, ಮಧ್ಯಪ್ರದೇಶದಲ್ಲಿ 33, ತೆಲಂಗಾಣದಲ್ಲಿ 12, ಕರ್ನಾಟಕದಲ್ಲಿ 6 ಜನರು ಸೇರಿದಂತೆ ದೇಶದಾದ್ಯಂತ ಒಟ್ಟು 206 ಮಂದಿ ಸಾವಿಗೀಡಾಗಿದ್ದಾರೆ.

ನಿನ್ನೆ (ಗುರುವಾರ) ದೇಶದಾದ್ಯಂತ 16002 ಕೊರೊನಾ ಸೋಂಕು ಪರೀಕ್ಷೆಗಳನ್ನು ಮಾಡಲಾಗಿದೆ. ಅದರಲ್ಲಿ ಶೇ.0.2 ಪ್ರಕರಣಗಳು ಪತ್ತೆಯಾಗಿವೆ. ಇದರಿಂದ ಕೊರೊನಾ ಸೋಂಕಿನ ಹರಡುವಿಕೆ ಗಂಭೀರ ಪ್ರಮಾಣ ತಲುಪಿಲ್ಲ ಎಂದು ತಿಳಿದುಬರುತ್ತದೆ ಎಂದು ಆರೋಗ್ಯ ಸಚಿವಾಲಯದ ಜಂಟಿ ಕಾರ್ಯದರ್ಶಿ ಲವ ಅಗರ್‌ವಾಲ್‌ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.