ADVERTISEMENT

Covid-19 India Update: 24 ಗಂಟೆಗಳಲ್ಲಿ 34,973 ಹೊಸ ಪ್ರಕರಣ, 260 ಸಾವು

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 10 ಸೆಪ್ಟೆಂಬರ್ 2021, 5:27 IST
Last Updated 10 ಸೆಪ್ಟೆಂಬರ್ 2021, 5:27 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ    

ನವದೆಹಲಿ: ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 34,973 ಹೊಸ ಪ್ರಕರಣಗಳು ವರದಿಯಾಗಿದ್ದು, 260 ಸೋಂಕಿತರು ಮೃತಪಟ್ಟಿದ್ದಾರೆ.

ಈ ವರೆಗೂ ದೇಶದಲ್ಲಿ ಒಟ್ಟು 3,31,74,954 ಪ್ರಕರಣಗಳು ದಾಖಲಾಗಿದ್ದು, ಅದರಲ್ಲಿ 3,23,42,299 ಸೋಂಕಿತರು ಗುಣಮುಖರಾಗಿದ್ದಾರೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ದೇಶದಲ್ಲಿ ಒಂದೇ ದಿನ 37,681 ಮಂದಿ ಕೋವಿಡ್‌ನಿಂದ ಚೇತರಿಸಿಕೊಂಡಿದ್ದಾರೆ. ಈಗಿರುವ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 3,90,646 ಆಗಿದೆ.

ADVERTISEMENT

ಇಲ್ಲಿವರೆಗೂ ಕೋವಿಡ್‌ನಿಂದ ಒಟ್ಟು 4,42,009 ಮಂದಿ ಮೃತಪಟ್ಟಿದ್ದಾರೆ. 72,37,84,586 ಡೋಸ್‌ ಲಸಿಕೆ ನೀಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.