ADVERTISEMENT

Covid-19 India Update: ಕೇರಳದಲ್ಲಿ 64,028 ಸಕ್ರಿಯ ಪ್ರಕರಣಗಳು

ಏಜೆನ್ಸೀಸ್
Published 28 ಡಿಸೆಂಬರ್ 2020, 15:40 IST
Last Updated 28 ಡಿಸೆಂಬರ್ 2020, 15:40 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ    

ನವದೆಹಲಿ: ಕೇರಳದಲ್ಲಿ ಕಳೆದ 24 ಗಂಟೆಗಳಲ್ಲಿ ಕೋವಿಡ್‌–19 ದೃಢಪಟ್ಟ 3,047 ಹೊಸ ಪ್ರಕರಣಗಳು ದಾಖಲಾಗಿದ್ದು, ಇದೇ ಅವಧಿಯಲ್ಲಿ 4,172 ಮಂದಿ ಗುಣಮುಖರಾಗಿದ್ದಾರೆ.

ಒಟ್ಟು 6,76,368 ಕೋವಿಡ್‌ ಪ್ರಕರಣಗಳಿದ್ದು, ಈ ಪೈಕಿ ಪ್ರಸ್ತುತ 64,028 ಪ್ರಕರಣಗಳು ಸಕ್ರಿಯವಾಗಿವೆ.

ಮಹಾರಾಷ್ಟ್ರದಲ್ಲಿ 2,498 ಹೊಸ ಪ್ರಕರಣಗಳು ವರದಿಯಾಗಿದ್ದು, 4,501 ಮಂದಿ ಗುಣಮುಖರಾಗಿದ್ದಾರೆ ಹಾಗೂ 50 ಮಂದಿ ಸಾವಿಗೀಡಾಗಿದ್ದಾರೆ. ಈವರೆಗೂ 18,14,449 ಮಂದಿ ಗುಣಮುಖರಾಗಿದ್ದಾರೆ ಹಾಗೂ 57,159 ಸಕ್ರಿಯ ಪ್ರಕರಣಗಳಿವೆ.

ADVERTISEMENT

ದೆಹಲಿಯಲ್ಲಿ 564 ಪ್ರಕರಣಗಳು, ತಮಿಳುನಾಡಿನಲ್ಲಿ 1,005, ಮಧ್ಯ ಪ್ರದೇಶದಲ್ಲಿ 876 ಹಾಗೂ ರಾಜಸ್ಥಾನದಲ್ಲಿ 798 ಹೊಸ ಪ್ರಕರಣಗಳು ದಾಖಲಾಗಿವೆ.

ಸೋಮವಾರ ಬೆಳಗ್ಗಿನ ವರೆಗೂ ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 20,021 ಹೊಸ ಕೋವಿಡ್‌ ಪ್ರಕರಣಗಳು ದಾಖಲಾಗಿದ್ದು, 279 ಸೋಂಕಿತರು ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ಭಾರತದಲ್ಲಿ ಬೆಳಕಿಗೆ ಬಂದಿರುವ ಒಟ್ಟು ಕೋವಿಡ್‌ ಪ್ರಕರಣಗಳ ಸಂಖ್ಯೆ 1,02,07,871ಕ್ಕೆ ತಲುಪಿದ್ದು, ಈ ವರೆಗೆ 1,47,901 ಮಂದಿ ಕೊರೊನಾ ಸೋಂಕಿನಿಂದ ಸಾವಿಗೀಡಾಗಿದ್ದಾರೆ.

ಇದುವರೆಗೆ ದೇಶದಲ್ಲಿ ಕೊರೊನಾ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 97,82,669ಕ್ಕೆ ತಲುಪಿದ್ದು, ಒಟ್ಟು 2,77,301 ಪ್ರಕರಣಗಳು ಸಕ್ರಿಯವಾಗಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.