ನವದೆಹಲಿ: ಭಾರತದಲ್ಲಿ ಕೊರೊನಾ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 32.5 ಲಕ್ಷ ದಾಟಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ತಿಳಿಸಿದೆ.
ದೇಶದ ಒಟ್ಟು ಕೋವಿಡ್ ಪ್ರಕರಣಗಳ ಪೈಕಿ ಮಹಾರಾಷ್ಟ್ರ, ಆಂಧ್ರಪ್ರದೇಶ, ತಮಿಳುನಾಡು, ಕರ್ನಾಟಕ ಮತ್ತು ಉತ್ತರ ಪ್ರದೇಶಗಳಿಂದ ಶೇ.60ರಷ್ಟು ಪ್ರಕರಣಗಳು ವರದಿಯಾಗಿವೆ. ಈ ಐದು ರಾಜ್ಯಗಳಲ್ಲಿ ಶೇ.62 ಸಕ್ರಿಯ ಪ್ರಕರಣಗಳಿದ್ದು, ಶೇ.70ರಷ್ಟು ಸಾವು ಸಂಭವಿಸಿದೆ.
ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ ಒಟ್ಟು 69,564 ಸೋಂಕಿತರು ಬಿಡುಗಡೆಗೊಂಡಿದ್ದು, ಚೇತರಿಕೆಗೊಂಡವರ ಪ್ರಮಾಣ ಶೇ.77.31ಕ್ಕೆ ತಲುಪಿದೆ.
ಭಾರತದಲ್ಲಿ ಒಟ್ಟಾರೆ 42 ಲಕ್ಷಕ್ಕೂ ಅಧಿಕ ಜನರಿಗೆ ಕೊರೊನಾ ವೈರಸ್ ಸೋಂಕು ತಗುಲಿದ್ದು, ಕಳೆದ 24 ಗಂಟೆಗಳಲ್ಲಿ 90,802 ಸೋಂಕು ಪ್ರಕರಣಗಳು ಪತ್ತೆಯಾಗಿವೆ. ಸೋಂಕಿತರ ಸಂಖ್ಯೆ 42,04,614ಕ್ಕೆ ಏರಿದ್ದು, 8,82,542 ಸಕ್ರಿಯ ಪ್ರಕರಣಗಳಿವೆ. 32,50,429 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 71,642 ಜನರು ಸಾವಿಗೀಡಾಗಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.