ADVERTISEMENT

Covid-19 India Update: ಶೇ 83.70ಕ್ಕೆ ತಲುಪಿದ ಚೇತರಿಸಿಕೊಂಡವರ ಪ್ರಮಾಣ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 2 ಅಕ್ಟೋಬರ್ 2020, 16:30 IST
Last Updated 2 ಅಕ್ಟೋಬರ್ 2020, 16:30 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   
""

ನವದೆಹಲಿ: ದೇಶದಾದ್ಯಂತ ಕೊರೊನಾ ಸೋಂಕಿನಿಂದ ಚೇತರಿಸಿಕೊಂಡವರ ಪ್ರಮಾಣ ಶೇ 83.70ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ಈ ವರೆಗೂ 53,52,078 ಜನರು ಸೋಂಕಿನಿಂದ ಚೇತರಿಸಿಕೊಂಡಿದ್ದು, 9,42,217 (ಶೇ 14.74) ಸಕ್ರಿಯ ಪ್ರಕರಣಗಳಿವೆ. 99,773 ಜನರು ಕೋವಿಡ್‌ನಿಂದ ಪ್ರಾಣ ಕಳೆದುಕೊಂಡಿದ್ದಾರೆ.

ದೇಶದಲ್ಲಿ ಕೊರೊನಾ ಸೋಂಕಿನ ಕೇಂದ್ರಬಿಂದುವಾಗಿ ಪರಿಣಮಿಸಿರುವ ಮಹಾರಾಷ್ಟ್ರದಲ್ಲಿ ಕಳೆದ 24 ಗಂಟೆಗಳಲ್ಲಿ 15,591 ಹೊಸ ಕೋವಿಡ್‌ ಪ್ರಕರಣಗಳು ಬೆಳಕಿಗೆ ಬಂದಿವೆ. ಸೋಂಕಿನಿಂದ 424 ಮಂದಿ ಮೃತಪಟ್ಟಿದ್ದಾರೆ.

ADVERTISEMENT

ಕರ್ನಾಟಕದಲ್ಲಿ 24 ಗಂಟೆ ಅವಧಿಯಲ್ಲಿ 8,793 ಹೊಸ ಕೊರೊನಾ ಪ್ರಕರಣಗಳು ದೃಢಪಟ್ಟಿವೆ. 125 ಮಂದಿ ಸಾವಿಗೀಡಾಗಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಕಳೆದ 24 ಗಂಟೆಗಳಲ್ಲಿ 3,310 ಹೊಸ ಪ್ರಕರಣಗಳು ವರದಿಯಾಗಿದ್ದು, 53 ಜನರು ಪ್ರಾಣ ಕಳೆದುಕೊಂಡಿದ್ದಾರೆ.

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಒಂದೇ ದಿನಕ್ಕೆ 2,920 ಹೊಸ ಪ್ರಕರಣಗಳು ದಾಖಲಾಗಿದ್ದು, 37 ಜನರು ಸಾವಗೀಡಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.