ADVERTISEMENT

ವಾಣಿಜ್ಯ ರಾಜಧಾನಿ ಮುಂಬೈನಲ್ಲಿ ಒಂದೇ ದಿನ 3,062 ಹೊಸ ಕೋವಿಡ್‌ ಪ್ರಕರಣ ದಾಖಲು

​ಪ್ರಜಾವಾಣಿ ವಾರ್ತೆ
Published 19 ಮಾರ್ಚ್ 2021, 15:45 IST
Last Updated 19 ಮಾರ್ಚ್ 2021, 15:45 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ    

ಮುಂಬೈ: ಮಹಾರಾಷ್ಟ್ರದಲ್ಲಿ ಸತತ ಎರಡನೇ ದಿನವೂ ಹೊಸ ಕೋವಿಡ್‌ ಪ್ರಕರಣಗಳ ಸಂಖ್ಯೆ 25 ಸಾವಿರದ ಗಡಿ ದಾಟಿರುವುದು ಜನರ ಆತಂಕವನ್ನು ಹೆಚ್ಚಿಸಿದೆ.

ದೇಶದ ವಾಣಿಜ್ಯ ರಾಜಧಾನಿ ಮುಂಬೈಯೊಂದರಲ್ಲೇ ಇಂದು(ಶುಕ್ರವಾರ) 3000ಕ್ಕೂ ಅಧಿಕ ಮಂದಿಯಲ್ಲಿ ಕೊರೊನಾ ಸೋಂಕು ಇರುವುದು ಬೆಳಕಿಗೆ ಬಂದಿದೆ.

ಕಳೆದ 24 ಗಂಟೆಗಳಲ್ಲಿ ಮಹಾರಾಷ್ಟ್ರದಾದ್ಯಂತ 25,681 ಹೊಸ ಪ್ರಕರಣಗಳು ಕಂಡುಬಂದಿದ್ದು, 70 ಸೋಂಕಿತರು ಪ್ರಾಣ ಕಳೆದುಕೊಂಡಿದ್ದಾರೆ.

ADVERTISEMENT

ಈ ವರೆಗೆ ಮಹಾರಾಷ್ಟ್ರದಲ್ಲಿ ಒಟ್ಟು 24,22,021 ಕೋವಿಡ್‌ ಪ್ರಕರಣಗಳು ದಾಖಲಾಗಿದ್ದು, 53,208 ಸೋಂಕಿತರು ಮೃತಪಟ್ಟಿದ್ದಾರೆ.

ಮುಂಬೈನಲ್ಲಿ ಇಂದು 3062 ಪ್ರಕರಣಗಳು ಹೊಸದಾಗಿ ಬೆಳಕಿಗೆ ಬಂದಿವೆ. 10 ಸೋಂಕಿತರು ಸಾವಿಗೀಡಾಗಿದ್ದಾರೆ.

ಇಲ್ಲಿವರೆಗೆ ಮುಂಬೈ ಮಹಾನಗರದಲ್ಲಿ ಒಟ್ಟು 3,55,897 ಮಂದಿಯಲ್ಲಿ ಕೊರೊನಾ ಸೋಂಕು ಇರುವುದು ಕಂಡುಬಂದಿದೆ. ಇದರಲ್ಲಿ 11,565 ಸೋಂಕಿತರು ಪ್ರಾಣ ಕಳೆದುಕೊಂಡಿದ್ದಾರೆ.

ಒಟ್ಟು 20,140 ಸಕ್ರಿಯ ಪ್ರಕರಣಗಳು ಮುಂಬೈನಲ್ಲಿದ್ದರೆ, 1,77,560 ಸಕ್ರಿಯ ಪ್ರಕರಣಗಳು ಮಹಾರಾಷ್ಟ್ರದಲ್ಲಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.