ನವದೆಹಲಿ: ಖಾಸಗಿ ಆಸ್ಪತ್ರೆಗಳಲ್ಲಿ ನೀಡಲಾಗುವ ಕೋವಿಡ್–19 ಲಸಿಕೆಗೆ ಪ್ರತಿ ಡೋಸ್‌ಗೆ ಗರಿಷ್ಠ ₹ 250 ಶುಲ್ಕವನ್ನು ಕೇಂದ್ರ ಸರ್ಕಾರ ನಿಗದಿ ಮಾಡಿದೆ.
ದೇಶದಾದ್ಯಂತ ಎರಡನೇ ಹಂತದ ಲಸಿಕಾ ಕಾರ್ಯಕ್ರಮವು ಮಾರ್ಚ್ 1ರಿಂದ ಆರಂಭವಾಗಲಿದ್ದು, ಸರ್ಕಾರಿ ಆರೋಗ್ಯ ಕೇಂದ್ರಗಳು ಹಾಗೂ ಆಯ್ದ ಖಾಸಗಿ ಆಸ್ಪತ್ರೆಗಳಲ್ಲಿ ಲಸಿಕೆ ಹಾಕಲಾಗುವುದು. 60 ವರ್ಷ ವಯಸ್ಸಿಗೂ ಮೇಲ್ಪಟ್ಟವರು ಹಾಗೂ ಇತರ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ 45 ವರ್ಷಕ್ಕೂ ಮೇಲ್ಪಟ್ಟವರು ಲಸಿಕೆ ಹಾಕಿಸಿಕೊಳ್ಳಲು ಅರ್ಹರಾಗಿದ್ದಾರೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ಲಸಿಕೆ ಹಾಕಲಾಗುವುದು. ಖಾಸಗಿ ಆಸ್ಪತ್ರೆಗಳು ಲಸಿಕೆಯ ವೆಚ್ಚ ₹150 ಹಾಗೂ ಸೇವಾ ಶುಲ್ಕದ ರೂಪದಲ್ಲಿ ₹100 ಸೇರಿ, ಗರಿಷ್ಠ ₹250ನ್ನು ಮಾತ್ರ ಪಡೆಯಬಹುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.