ADVERTISEMENT

ವಲಸೆ ಕಾರ್ಮಿಕರ ಸಂಕಷ್ಟ ಕುರಿತ ಅರ್ಜಿ ವಿಚಾರಣೆ ಕೈಗೆತ್ತಿಕೊಂಡ ಸುಪ್ರೀಂ ಕೋರ್ಟ್

​ಪ್ರಜಾವಾಣಿ ವಾರ್ತೆ
Published 31 ಮಾರ್ಚ್ 2020, 8:42 IST
Last Updated 31 ಮಾರ್ಚ್ 2020, 8:42 IST
   

ನವದೆಹಲಿ:ದೇಶದಾದ್ಯಂತ ಲಾಕ್‌ಡೌನ್‌ ಘೋಷಿಸಿದ ನಂತರ ತೀವ್ರ ತೊಂದರೆಗೆ ಒಳಗಾಗಿರುವ ವಲಸೆ ಕಾರ್ಮಿಕರಿಗೆ ಆಹಾರ ಮತ್ತು ಆಶ್ರಯ ಒದಗಿಸುವ ನಿಟ್ಟಿನಲ್ಲಿ ನಿರ್ದೇಶನ ನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್‌ ಕೈಗೆತ್ತಿಕೊಂಡಿದೆ.

ಇಂದು ಬೆಳಗ್ಗೆ 11 ಗಂಟೆ ಹೊತ್ತಿಗೆ ರಸ್ತೆ ಮೇಲೆ ಯಾವುದೇ ವಲಸೆ ಕಾರ್ಮಿಕರು ಇರಲಿಲ್ಲ ಎಂದು ಅರ್ಜಿ ವಿಚಾರಣೆ ವೇಳೆ ಕೇಂದ್ರದ ಗೃಹ ಕಾರ್ಯದರ್ಶಿ ಸುಪ್ರೀಂ ಕೋರ್ಟ್‌ಗೆ ತಿಳಿಸಿದರು.

ಈ ಹೇಳಿಕೆಗೆ ಪ್ರತಿಕ್ರಿಯಿಸಿ ವಾದ ಮುಂಡಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, 'ಇಂದು ಬೆಳಿಗ್ಗೆ 11 ಗಂಟೆಯ ಹೊತ್ತಿಗೆ ಯಾರೂ ರಸ್ತೆಯಲ್ಲಿಲ್ಲ ಎಂದು ಗೃಹ ಕಾರ್ಯದರ್ಶಿ ಹೇಳುತ್ತಿದ್ದಾರೆ. ಆದರೆ, ವಲಸೆ ಕಾರ್ಮಿಕರನ್ನು ಸಮೀಪದ ಆಶ್ರಯ ತಾಣಕ್ಕೆ ಬಲವಂತವಾಗಿ ಕರೆದೊಯ್ಯಲಾಗಿದೆ' ಎಂದು ಹೇಳಿದರು.

ADVERTISEMENT

ಕೊರೊನಾ ಸೋಂಕು ಹರಡುವಿಕೆ ತಡೆಗಟ್ಟಲು ಎಲ್ಲಾ ಸಾರ್ವಜನಿಕ ಸಾರಿಗೆಯನ್ನು ಸ್ಥಗಿತಗೊಳಿಸಲಾಯಿತು. ನಂತರ ಮಹಾನಗರಗಳಲ್ಲಿರುವ ವಲಸೆ ಕಾರ್ಮಿಕರು ತಮ್ಮ ಊರಿಗಳಿಗೆ ಕಾಲ್ನಡಿಗೆಯಲ್ಲಿಯೇ ತೆರಳಲು ಆರಂಭಿಸಿದರು. ದೀರ್ಘ ಪ್ರಯಾಣದಲ್ಲಿ ಹಲವು ಹೃದಯ ವಿದ್ರಾವಕ ಘಟನೆಗಳು ನಡೆದವು.

ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎಸ್‌.ಎ. ಬೊಬ್ಡೆ ಅವರು 24 ಗಂಟೆಗಳ ಒಳಗೆ ತಜ್ಞರ ಸಮಿತಿಯನ್ನು ರಚಿಸುವಂತೆ ಸರ್ಕಾರಕ್ಕೆ ಆದೇಶ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.