ADVERTISEMENT

ಕೊರೊನಾ ಸೋಂಕಿತರ ಚೇತರಿಕೆ ಪ್ರಮಾಣ ಶೇ 64.54ಕ್ಕೆ ಏರಿದೆ: ಡಾ.ಹರ್ಷವರ್ಧನ್

ಏಜೆನ್ಸೀಸ್
Published 31 ಜುಲೈ 2020, 7:32 IST
Last Updated 31 ಜುಲೈ 2020, 7:32 IST
ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷವರ್ಧನ್‌
ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷವರ್ಧನ್‌   

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಚೇತರಿಕೆ ಪ್ರಮಾಣ ಶೇ 64.54ಕ್ಕೆ ಏರಿದೆಎಂದು ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷವರ್ಧನ್‌ ತಿಳಿಸಿದರು.

ಹರ್ಷವರ್ಧನ್ ಅವರ ಅಧ್ಯಕ್ಷತೆಯಲ್ಲಿ, ವಿವಿಧ ಸಚಿವರೊಂದಿಗೆ ನಡೆದ ಕೋವಿಡ್‌ ಕುರಿತ ವಿಡಿಯೊ ಕಾನ್ಫಿರೆನ್ಸ್‌ನಲ್ಲಿ ಅವರು ಮಾತನಾಡಿದರು.

'ದೇಶದಲ್ಲಿ ಕೊರೊನಾ ಸೋಂಕಿತರ ಚೇತರಿಕೆ ಪ್ರಮಾಣ ಶೇ 64.54ರಷ್ಟು ಹೆಚ್ಚಾಗಿದೆ. ಕಳೆದ 21 ದಿನಗಳಲ್ಲಿ ಚೇತರಿಕೆ ಪ್ರಮಾಣ ದ್ವಿಗುಣಗೊಂಡಿದೆ' ಎಂದು ಅವರು ತಿಳಿಸಿದರು.

ವಿಡಿಯೊ ಕಾನ್ಫೆರೆನ್ಸ್‌ನಲ್ಲಿ ವಿದೇಶಾಂಗ ಸಚಿವ ಎಸ್. ಜೈಶಂಕರ್ ಮತ್ತು ಕೇಂದ್ರ ನಾಗರಿಕ ವಿಮಾನಯಾನ ಸಚಿವ ಹರ್ದೀಪ್ ಸಿಂಗ್ ಪುರಿ ಉಪಸ್ಥಿತರಿದ್ದರು.

ADVERTISEMENT

ದೇಶದಾದ್ಯಂತ ಗುರುವಾರ ಒಂದೇ ದಿನ ಒಟ್ಟು 55,079 ಕೋವಿಡ್‌ ಪ್ರಕರಣಗಳು ದೃಢಪಟ್ಟಿದ್ದು, 779 ಸೋಂಕಿತರು ಮೃತಪಟ್ಟಿದ್ದಾರೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 16,38,871ಕ್ಕೆ ಏರಿಕೆಯಾಗಿದ್ದು, ಕೋವಿಡ್‌ನಿಂದಾಗಿ ಸಾವಿಗೀಡಾದವರ ಸಂಖ್ಯೆ 35,747ಕ್ಕೆ ತಲುಪಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.