ADVERTISEMENT

Covid-19 India Update | 49,310 ಹೊಸ ಪ್ರಕರಣ, 740 ಮಂದಿ ಸಾವು

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 24 ಜುಲೈ 2020, 5:06 IST
Last Updated 24 ಜುಲೈ 2020, 5:06 IST
ಸೋಂಕು ಪತ್ತೆ ಪರೀಕ್ಷೆಯ ಪ್ರಾತಿನಿಧಿಕ ಚಿತ್ರ
ಸೋಂಕು ಪತ್ತೆ ಪರೀಕ್ಷೆಯ ಪ್ರಾತಿನಿಧಿಕ ಚಿತ್ರ   

ನವದೆಹಲಿ: ದೇಶದಾದ್ಯಂತ ಕಳೆದ 24 ಗಂಟೆಗಳ ಅವಧಿಯಲ್ಲಿ 49,310 ಕೋವಿಡ್‌ ದೃಢಪಟ್ಟ ಹೊಸ ಪ್ರಕರಣಗಳು ದಾಖಲಾಗಿದ್ದು, 740 ಮಂದಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.

ಇದರೊಂದಿಗೆ ದೇಶದಲ್ಲಿ ಸೋಂಕಿತರ ಸಂಖ್ಯೆ 12,87,945ಕ್ಕೆ ಏರಿಕೆಯಾಗಿದ್ದು, 30,601 ಮಂದಿ ಸಾವಿಗೀಡಾಗಿದ್ದಾರೆ.

ಇದುವರೆಗೆ 8,17,209ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸದ್ಯ ದೇಶದಲ್ಲಿ 4,40,135 ಸಕ್ರಿಯ ಪ್ರಕರಣಗಳು ಇವೆ.

ADVERTISEMENT

ದೇಶದಲ್ಲಿ ಅತಿ ಹೆಚ್ಚು ಸೋಂಕಿರನ್ನು ಹೊಂದಿರುವ ಮಹಾರಾಷ್ಟ್ರದಲ್ಲಿ 3.38 ಲಕ್ಷ ಮಂದಿಗೆ ಸೋಂಕು ತಗುಲಿದ್ದು, 12,556 ಮಂದಿ ಮೃತಪಟ್ಟಿದ್ದಾರೆ. ತಮಿಳುನಾಡಿನಲ್ಲಿ 1.8 ಲಕ್ಷ ಮಂದಿಗೆ ಸೋಂಕು ದೃಢಪಟ್ಟಿದ್ದು, ಇದುವರೆಗೆ 3,144 ಮಂದಿ ಸಾವಿಗೀಡಾಗಿದ್ದಾರೆ.

ರಾಜಧಾನಿ ದೆಹಲಿಯಲ್ಲಿ 1.2 ಲಕ್ಷ ಜನರಿಗೆ ಸೋಂಕು ತಗುಲಿದೆ. ಈವರೆಗೆ 3,719 ಮಂದಿ ಕೊನೆಯುಸಿರೆಳೆದಿದ್ದಾರೆ.

ಕರ್ನಾಟಕದಲ್ಲಿ ಗುರುವಾರ ಒಂದೇ ದಿನ 5,030 ಮಂದಿಗೆ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 80,863ಕ್ಕೆ ಏರಿಕೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.