ADVERTISEMENT

Covid-19 India Update | ಮಹಾರಾಷ್ಟ್ರದಲ್ಲಿ 3,870 ಹೊಸ ಪ್ರಕರಣ,101 ಮಂದಿ ಸಾವು

ದಿನವೊಂದರಲ್ಲಿ ವರದಿಯಾದ ಗರಿಷ್ಠ ಪ್ರಕರಣ

ಏಜೆನ್ಸೀಸ್
Published 21 ಜೂನ್ 2020, 17:25 IST
Last Updated 21 ಜೂನ್ 2020, 17:25 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಮಾಹಿತಿ ಪ್ರಕಾರ ದೇಶದಲ್ಲಿ 1,69,451 ಸಕ್ರಿಯ ಪ್ರಕರಣಗಳಿವೆ. ಇಲ್ಲಿಯವರೆಗೆ 13,254 ಮಂದಿ ಸಾವಿಗೀಡಾಗಿದ್ದು 227755 ಮಂದಿ ಚೇತರಿಸಿಕೊಂಡಿದ್ದಾರೆ.410461 ಮಂದಿ ಸೋಂಕಿತರಿದ್ದಾರೆ.

ಮಹಾರಾಷ್ಟ್ರದಲ್ಲಿ ಒಂದೇ ದಿನ 3,870 ಮಂದಿಗೆ ಸೋಂಕು ತಗುಲಿದ್ದು ಸೋಂಕಿತರ ಸಂಖ್ಯೆ1,32,075 ಆಗಿದೆ. ಭಾನುವಾರ 101 ಮಂದಿ ಸಾವಿಗೀಡಾಗಿದ್ದು ಸಾವಿನ ಸಂಖ್ಯೆ 6,170 ಆಗಿದೆ ಎಂದು ಆರೋಗ್ಯ ಅಧಿಕಾರಿ ಹೇಳಿದ್ದಾರೆ.

ಮುಂಬೈನಲ್ಲಿ ಪ್ರಸ್ತುತ 65,000 ಪಾಸಿಟಿವ್ ಪ್ರಕರಣಗಳಿದ್ದು ಇಲ್ಲಿಯವರೆಗೆ 3,600 ಮಂದಿ ಸಾವಿಗೀಡಾಗಿದ್ದಾರೆ.ಇಲ್ಲಿ ಶೇ.50ರಷ್ಟು ರೋಗಿಗಳು ಮಾತ್ರ ಚೇತರಿಸಿಕೊಳ್ಳುತ್ತಿದ್ದಾರೆ.

ADVERTISEMENT

ಹರ್ಯಾಣದಲ್ಲಿ ಭಾನುವಾರ 412 ಹೊಸ ಪ್ರಕರಣಗಳು ಪತ್ತೆಯಾಗಿದ್ದು ಒಟ್ಟು ಪ್ರಕರಣಗಳ ಸಂಖ್ಯೆ 10635 ಆಗಿದೆ ಎಂದು ರಾಜ್ಯ ಆರೋಗ್ಯ ಇಲಾಖೆ ಹೇಳಿದೆ.

ಕಳೆದ 24 ಗಂಟೆಗಳಲ್ಲಿ ಇಂಡೊ-ಟಿಬೆಟಿಯನ್ ಗಡಿ ಪೊಲೀಸರಲ್ಲಿ 14 ಸಿಬ್ಬಂದಿಗಳಿಗೆ ಕೋವಿಡ್-19 ದೃಢಪಟ್ಟಿದೆ.ಒಟ್ಟು 58 ಸಕ್ರಿಯ ಪ್ರಕರಣಗಳಿದ್ದು 210 ಮಂದಿ ಚೇತರಿಸಿಕೊಂಡಿದ್ದಾರೆ ಎಂದು ಇಂಡೊ-ಟಿಬೆಟಿಯನ್ ಗಡಿ ಪೊಲೀಸರು ಹೇಳಿದ್ದಾರೆ.

ಗುಜರಾತಿನಲ್ಲಿ ಒಂದೇ 580 ಹೊಸ ಪ್ರಕರಣಗಳು ಪತ್ತೆಯಾಗಿದ್ದು 25 ಮಂದಿ ಸಾವಿಗೀಡಾಗಿದ್ದಾರೆ. ಒಟ್ಟು 27,317 ಪ್ರಕರಣಗಳಿದ್ದು ಇಲ್ಲಿಯವರಿಗೆ 19,357 ಮಂದಿ ಗುಣಮುಖರಾಗಿದ್ದಾರೆ. 1,664 ಮಂದಿ ಸಾವಿಗೀಡಾಗಿದ್ದಾರೆ ಎಂದು ರಾಜ್ಯ ಆರೋಗ್ಯ ಇಲಾಖೆ ಹೇಳಿದ್ದಾರೆ.

ದೆಹಲಿಯಲ್ಲಿ 3,000 ಹೊಸ ಪ್ರಕರಣಗಳು ವರದಿಯಾಗಿದ್ದು 63 ಮಂದಿ ಸಾವಿಗೀಡಾಗಿದ್ದಾರೆ, ಇಲ್ಲಿಯವರೆಗೆ 2,175 ಮಂದಿ ಸಾವಿಗೀಡಾಗಿದ್ದಾರೆ, ಒಟ್ಟು 59746 ಕೋವಿಡ್-19 ಪ್ರಕರಣಗಳಿವೆ.

ತಮಿಳುನಾಡಿನಲ್ಲಿ ಭಾನುವಾರ 2,532 ಪ್ರಕರಣಗಳು ಪತ್ತೆಯಾಗಿದ್ದು, 53 ಮಂದಿ ಸಾವಿಗೀಡಾಗಿದ್ದಾರೆ. ಇಲ್ಲಿ ಒಟ್ಟು 59377 ಪ್ರಕರಣಗಳಿದ್ದು 25863 ಸಕ್ರಿಯ ಪ್ರಕರಣಗಳಿವೆ .ಇಲ್ಲಿಯವರೆಗೆ 757 ಮಂದಿ ಸಾವಿಗೀಡಾಗಿದ್ದಾರೆ ಎಂದು ರಾಜ್ಯ ಆರೋಗ್ಯ ಇಲಾಖೆ ಹೇಳಿದೆ.

ಕೇರಳದಲ್ಲಿ 133 ಹೊಸ ಪ್ರಕರಣಗಳು ಪತ್ತೆಯಾಗಿದ್ದು ಒಟ್ಟು ಪ್ರಕರಣಗಳ ಸಂಖ್ಯೆ 3172ಕ್ಕೇರಿದೆ, 93 ಮಂದಿ ಭಾನುವಾರ ಗುಣಮುಖರಾಗಿದ್ದಾರೆ, 1,490 ಮಂದಿ ಚಿಕಿತ್ಸೆಯಲ್ಲಿದ್ದು ಇಲ್ಲಿಯವರೆಗೆ 21 ಮಂದಿ ಸಾವಿಗೀಡಾಗಿದ್ದಾರೆ.

ಆಂಧ್ರ ಪ್ರದೇಶದಲ್ಲಿ 477 ಹೊಸ ಪ್ರಕರಣ ಮತ್ತು 5 ಮಂದಿ ಸಾವಿಗೀಡಾಗಿದ್ದಾರೆ. ಒಟ್ಟು ಪ್ರಕರಣಗಳ ಸಂಖ್ಯೆ 8929 ಆಗಿದ್ದು, 106 ಮಂದಿ ಸಾವಿಗೀಡಾಗಿದ್ದಾರೆ. ಉತ್ತರಾಖಂಡದಲ್ಲಿ 23 ಮಂದಿಗೆ ಕೋವಿಡ್ ದೃಢಪಟ್ಟಿದ್ದು, ಒಟ್ಟು ಸೋಂಕಿತರ ಸಂಖ್ಯೆ 2324ಕ್ಕೆ ಏರಿದೆ.
ರಾಜಸ್ಥಾನದಲ್ಲಿ 393 ಹೊಸ ಪ್ರಕರಣಗಳು ವರದಿಯಾಗಿದ್ದು 12 ಮಂದಿ ಸಾವಿಗೀಡಾಗಿದ್ದಾರೆ .ಅದೇ ವೇಳೆ ಪಶ್ಚಿಮ ಬಂಗಾಳದಲ್ಲಿ 414 ಹೊಸ ಪ್ರಕರಣಗಳು ವರದಿಯಾಗಿದ್ದು 15 ಮಂದಿ ಸಾವಿಗೀಡಾಗಿದ್ದಾರೆ. ಗೋವಾದಲ್ಲಿ 64 ಹೊಸ ಪ್ರಕರಣಗಳು ಪತ್ತೆಯಾಗಿದ್ದು ಒಟ್ಟು ಪ್ರಕರಣಗಳ ಸಂಖ್ಯೆ 818 ಆಗಿದೆ.
ಜಮ್ಮು ಮತ್ತು ಕಾಶ್ಮೀರದಲ್ಲಿ 122 ಹೊಸ ಪ್ರಕರಣಗಳೊಂದಿಗೆ ಪ್ರಕರಣಗಳ ಸಂಖ್ಯೆ 5956 ಆಗಿದೆ, ಇಲ್ಲಿಯವರೆಗೆ 82 ಮಂದಿ ಸಾವಿಗೀಡಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ ಉತ್ತರ ಪ್ರದೇಶದಲ್ಲಿ 596 ಹೊಸ ಪ್ರಕರಣಗಳು ವರದಿಯಾಗಿದೆ. 6186 ಸಕ್ರಿಯ ಪ್ರಕರಣಗಳಿದ್ದು, ಇಲ್ಲಿಯವರೆಗೆ ಸಾವಿಗೀಡಾದವರ ಸಂಖ್ಯೆ 550 ಆಗಿದೆ.

ದೇಶದಾದ್ಯಂತ ಕಳೆದ 24 ಗಂಟೆಗಳಲ್ಲಿ 15,413 ಹೊಸ ಕೋವಿಡ್–19 ಪ್ರಕರಣಗಳು ವರದಿಯಾಗಿದೆ. 306 ಜನ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಭಾನುವಾರ ಬೆಳಿಗ್ಗೆ ತಿಳಿಸಿದೆ. ಈವರೆಗೆ ದಿನವೊಂದರಲ್ಲಿ ವರದಿಯಾದ ಗರಿಷ್ಠ ಕೊರೊನಾ ಪ್ರಕರಣ ಇದಾಗಿದೆ.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.