ADVERTISEMENT

ಕೊರೊನಾ ಸೋಂಕು: ಅಂತರರಾಷ್ಟ್ರೀಯ ವಿಮಾನ ಸಂಚಾರ ಸೆ.30ರವರೆಗೆ ಸ್ಥಗಿತ

ಪಿಟಿಐ
Published 31 ಆಗಸ್ಟ್ 2020, 8:36 IST
Last Updated 31 ಆಗಸ್ಟ್ 2020, 8:36 IST
ವಿಮಾನಗಳು– ಸಾಂದರ್ಭಿಕ ಚಿತ್ರ
ವಿಮಾನಗಳು– ಸಾಂದರ್ಭಿಕ ಚಿತ್ರ   

ನವದೆಹಲಿ: ಕೊರೊನಾ ಸೋಂಕು ಹರಡುವಿಕೆಯನ್ನು ನಿಯಂತ್ರಿಸುವ ದೃಷ್ಟಿಯಿಂದ ಅಂತರರಾಷ್ಟ್ರೀಯ ವಿಮಾನ ಸಂಚಾರದ ಮೇಲೆ ವಿಧಿಸಿರುವ ನಿರ್ಬಂಧವನ್ನು ಸೆಪ್ಟೆಂಬರ್ 30ರವರೆಗೆ ವಿಸ್ತರಿಸಲಾಗಿದೆ ಎಂದು ನಾಗರಿಕ ವಿಮಾನಯಾನ ಪ್ರಧಾನ ನಿರ್ದೇಶನಾಲಯದ ಕಚೇರಿ ಸುತ್ತೋಲೆಯಲ್ಲಿ ತಿಳಿಸಿದೆ.

ಆದರೆ, ಕೆಲವೊಂದು ಪ್ರಕರಣಗಳನ್ನು ಗಮನಿಸಿ, ಈಗಾಗಲೇ ನಿಗದಿಯಾಗಿರುವ ಅಂತರರಾಷ್ಟ್ರೀಯ ವಿಮಾನಗಳನ್ನು ಆಯ್ದ ಮಾರ್ಗಗಳಲ್ಲಿ ಸಂಚರಿಸಲು ಅನುಮತಿ ನೀಡಬಹುದು ಎಂದು ಡಿಜಿಸಿಎ ಸುತ್ತೋಲೆಯಲ್ಲಿ ಉಲ್ಲೇಖಿಸಲಾಗಿದೆ.

‌ಈ ಹಿಂದೆ ಕೊರೊನಾ ವೈರಸ್ ಸೋಂಕು ಹರಡುವಿಕೆಯನ್ನು ತಡೆಗಟ್ಟುವುದುಕ್ಕಾಗಿ ಮಾರ್ಚ್ 31ರವೆಗೆ ಅಂತರರಾಷ್ಟ್ರೀಯ ವಿಮಾನ ಸಂಚಾರವನ್ನು ನಿಷೇಧಿಸಲಾಗಿತ್ತು.

ADVERTISEMENT

ಇವೆಲ್ಲದರ ನಡುವೆ ಮೇ ತಿಂಗಳಿನಿಂದ ವಂದೇ ಭಾರತ್ ಮಿಷನ್ ಅಡಿಯಲ್ಲಿ ವಿಶೇಷ ಅಂತರರಾಷ್ಟ್ರೀಯ ವಿಮಾನಗಳು ಕಾರ್ಯನಿರ್ವಹಿಸುತ್ತಿವೆ. ನಂತರ ಜುಲೈ ತಿಂಗಳಿನಿಂದ ದ್ವಿಪಕ್ಷೀಯ ರಾಷ್ಟ್ರಗಳ ನಡುವಿನ ಒಪ್ಪಂದೊಂದಿಗೆ ಈ ವಿಮಾನಗಳು ಹಾರಾಟ ನಡೆಸುತ್ತಿವೆ.

ಅಂದ ಹಾಗೆ, ಡಿಜಿಸಿಎ ಹೊರಡಿಸಿರುವ ಹೊಸ ಆದೇಶ ಅಂತರರಾಷ್ಟ್ರೀಯ ಸರಕು ಸಾಗಣೆ ವಿಮಾನಗಳಿಗೆ ಅನ್ವಯವಾಗುವುದಿಲ್ಲ ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.