ADVERTISEMENT

Covid India Report: 104 ಕೋವಿಡ್ ಹೊಸ ಪ್ರಕರಣಗಳು

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 16 ಜನವರಿ 2023, 2:51 IST
Last Updated 16 ಜನವರಿ 2023, 2:51 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ನವದೆಹಲಿ: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 104 ಕೋವಿಡ್ –19ರ ಹೊಸ ಸೋಂಕು ಪ್ರಕರಣಗಳು ದಾಖಲಾಗಿವೆ ಎಂದು ಕೇಂದ್ರ ಆರೋಗ್ಯ ಇಲಾಖೆ ತಿಳಿಸಿದೆ.

ಇದೇ ವೇಳೆ ಸೋಂಕಿನಿಂದ 4 ಮಂದಿ ಮೃತಪಟ್ಟಿದ್ದಾರೆ. ಅದರಲ್ಲಿ ಕೇರಳದಲ್ಲಿ 2, ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರದಲ್ಲಿ ತಲಾ ಒಬ್ಬರು ಮೃತರಾಗಿದ್ದಾರೆ. ಇದರೊಂದಿಗೆ ಕೋವಿಡ್ –19 ಸಕ್ರಿಯ ಪ್ರಕರಣಗಳು ಸಂಖ್ಯೆ 2,149ಕ್ಕೆ ಇಳಿಕೆಯಾಗಿದೆ.

ದೈನಂದಿನ ಕೋವಿಡ್–19ರ ಪಾಸಿಟಿವಿಟಿ ದರವು ಶೇ.0.11 ರಷ್ಟಿದ್ದರೆ, ವಾರದ ಪಾಸಿಟಿವಿಟಿ ದರವು ಶೇಕಡಾ 0.12 ರಷ್ಟಿದೆ. ಒಟ್ವಾರೆ ಈವರೆಗೆ ದೇಶದಲ್ಲಿ 4.46 ಕೋಟಿಗೆ (4,46,81,040) ಕೋವಿಡ್ ಪ್ರಕರಣಗಳು ದಾಖಲಾಗಿವೆ. ಇಲ್ಲಿಯವರೆಗೂ 5,30,726 ಜನರು ಕೋವಿಡ್‌ನಿಂದ ಮೃತಪಟ್ಟಿದ್ದಾರೆ.

ADVERTISEMENT

ಸಕ್ರಿಯ ಕೋವಿಡ್–19 ಸೋಂಕು ಪ್ರಕರಣಗಳು ಒಟ್ಟು ಶೇ.0.01ರಷ್ಟಿದೆ. ಆದರೆ, ಚೇತರಿಕೆ ದರವು ಶೇ.98.80ಕ್ಕೆ ಎಂದು ಸಚಿವಾಲಯ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.