ADVERTISEMENT

Covid-19 India Update| 24 ಗಂಟೆಯಲ್ಲಿ 3390 ಹೊಸ ಪ್ರಕರಣ, 103 ಮಂದಿ ಸಾವು

​ಪ್ರಜಾವಾಣಿ ವಾರ್ತೆ
Published 8 ಮೇ 2020, 5:37 IST
Last Updated 8 ಮೇ 2020, 5:37 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ನವದೆಹಲಿ: ಕಳೆದ 24 ಗಂಟೆಗಳಲ್ಲಿ 3390 ಹೊಸ ಪ್ರಕರಣಗಳು ವರದಿಯಾಗಿದ್ದು,103 ಮಂದಿ ಸಾವಿಗೀಡಾಗಿದ್ದಾರೆ.

ದೇಶದಲ್ಲಿ ಒಟ್ಟು ಪ್ರಕರಣಗಳಸಂಖ್ಯೆ 56,342ಕ್ಕೇರಿದೆ. ಇಲ್ಲಿಯವರೆಗೂ ಒಟ್ಟು 1886 ಜನರು ಮೃತಪಟ್ಟಿದ್ದಾರೆ.

ಗುರುವಾರ ಬೆಳ್ಳಗೆಯಿಂದ ಶುಕ್ರವಾರ ಬೆಳಗ್ಗೆವರೆಗೂ 3390 ಹೊಸ ಪ್ರಕರಣಗಳು ಪತ್ತೆಯಾಗಿವೆ. ಒಂದೇ ದಿನ 103 ಜನರು ಮೃತಪಟ್ಟಿದ್ದಾರೆ.

ADVERTISEMENT

ಒಟ್ಟು ಪ್ರಕರಣಗಳಲ್ಲಿ 37,916 ಪ್ರಕರಣಗಳು ಸಕ್ರಿಯವಾಗಿವೆ. ಇವರೆಲ್ಲಾ ದೇಶದ ವಿವಿಧ ಆಸ್ಪತ್ರೆಗಳಲ್ಲಿ ಹಾಗೂ ವಿವಿಧಕ್ವಾರಂಟೈನ್‌ಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಲ್ಲಿಯವರೆಗೂ 16,539 ಜನರು ಗುಣಮುಖರಾಗಿ ಆಸ್ಪತ್ರೆಗಳಿಂದ ಗುಣಮುಖರಾಗಿದ್ದಾರೆ.

ಪಶ್ಚಿಮ ಬಂಗಾಳ, ಮಹಾರಾಷ್ಟ್ರ, ಗುಜರಾತ್‌, ದೆಹಲಿ, ತಮಿಳುನಾಡು, ಮಧ್ಯಪ್ರದೇಶ ಮತ್ತು ರಾಜಸ್ಥಾನ ರಾಜ್ಯಗಳಲ್ಲಿ ಕೊರೊನಾ ವೈರಸ್‌ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿವೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ಮಹಾರಾಷ್ಟ್ರದಲ್ಲಿ 16,758, ತಮಿಳುನಾಡಿನಲ್ಲಿ 4,829, ದೆಹಲಿಯಲ್ಲಿ5,532, ಗುಜರಾತ್‌ನಲ್ಲಿ 6,625,ಮಧ್ಯಪ್ರದೇಶದಲ್ಲಿ 3,318 ಪ್ರಕರಣಗಳು ವರದಿಯಾಗಿವೆ. ಮಹಾರಾಷ್ಟ್ರದಲ್ಲೇ ಅತಿ ಹೆಚ್ಚು ಪ್ರಕರಣಗಳು ವರದಿಯಾಗಿವೆ.

ಕೊರೊನಾ ವಿರುದ್ಧದ ಹೋರಾಟದಲ್ಲಿ ಮುಂಚೂಣಿಯಲ್ಲಿರುವ ಆರೋಗ್ಯ ಸಿಬ್ಬಂದಿ ಹಾಗೂ ಭದ್ರತಾ ಸಿಬ್ಬಂದಿ ಹೆಚ್ಚಿನ ಸಂಖ್ಯೆಯಲ್ಲಿ ಸೋಂಕಿಗೆ ಒಳಗಾಗುತ್ತಿರುವುದು ವರದಿಯಾಗಿದೆ. ಮಹಾರಾಷ್ಟ್ರದಲ್ಲಿ ಕನಿಷ್ಠ 531 ಪೊಲೀಸ್‌ ಸಿಬ್ಬಂದಿಯಲ್ಲಿ ಕೋವಿಡ್‌–19 ದೃಢಪಟ್ಟಿದೆ.

ತಮಿಳುನಾಡಿನಲ್ಲಿ ಒಂದೇ ದಿನ 580 ಹೊಸ ಪ್ರಕರಣಗಳು ದಾಖಲಾಗಿವೆ. ಚೆನ್ನೈನ ಕೊಯಂಬೇಡು ಮಾರುಕಟ್ಟೆ ಇದೀಗ ಕೊರೊನಾದ ಹೊಸ ಹಾಟ್‌ಸ್ಪಾಟ್‌ ಆಗಿ ಪರಿಣಮಿಸಿದ್ದು, ಪ್ರಸ್ತುತ ರಾಜ್ಯದಲ್ಲಿ 3,822 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ..

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.