ADVERTISEMENT

ದೇಶದಲ್ಲಿ ಕೋವಿಡ್‌–19ನಿಂದ ಬಳಲುತ್ತಿದ್ದ 10 ಜನ ಗುಣಮುಖ, ಸೋಂಕಿತರ ಸಂಖ್ಯೆ 83

​ಪ್ರಜಾವಾಣಿ ವಾರ್ತೆ
Published 14 ಮಾರ್ಚ್ 2020, 10:47 IST
Last Updated 14 ಮಾರ್ಚ್ 2020, 10:47 IST
ಕೋವಿಡ್‌–19
ಕೋವಿಡ್‌–19   

ನವದೆಹಲಿ: ದೇಶದಲ್ಲಿ ಕೋವಿಡ್‌–19 ಸೋಂಕಿನಿಂದ ಬಳಲುತ್ತಿರುವವರ ಸಂಖ್ಯೆ 83ಕ್ಕೆ ಏರಿಕೆಯಾಗಿದ್ದು 10 ಜನ ಗುಣಮುಖರಾಗಿ ವಿವಿಧ ಆಸ್ಪತ್ರೆಗಳಿಂದ ಮನೆಗೆ ತೆರಳಿದ್ದಾರೆ.

ಕೋವಿಡ್‌–19 ಸೋಂಕಿನಿಂದ ಬಳಲುತ್ತಿದ್ದ 10 ಜನರು ಗುಣಮುಖರಾಗಿ ಮನೆಗಳಿಗೆ ತೆರಳಿದ್ದಾರೆ ಎಂದ ಹಿಂದೂಸ್ತಾನ್‌ ಟೈಮ್ಸ್‌ ವರದಿ ಮಾಡಿದೆ. ಉತ್ತರ ಪ್ರದೇಶದಲ್ಲಿ ಐವರು ಹಾಗೂ ರಾಜಸ್ಥಾನ ಮತ್ತು ದೆಹಲಿಯ ತಲಾ ಒಬ್ಬರು ಮತ್ತು ಇತರೆ ಕಡೆ ಮೂವರು ರೋಗಿಗಳು ಗುಣಮುಖರಾಗಿ ಆಸ್ಪತ್ರೆಗಳಿಂದ ಮನೆಗಳಿಗೆ ತೆರಳಿದ್ದಾರೆ.

ಗುಣಮುಖರಾಗಿರುವ ವ್ಯಕ್ತಿಗಳಿಗೆ 14 ದಿನಗಳ ಹಿಂದೆ ಪಾಸಿಟಿವ್‌ ವರದಿ ಬಂದಿದ್ದರಿಂದ ಪ್ರತ್ಯೇಕವಾಗಿರಿಸಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದ ಮೇಲೆ ಮತ್ತೆ ಪರೀಕ್ಷೆ ನಡೆಸಿದಾಗವರದಿಯಲ್ಲಿ ನೆಗೆಟಿವ್‌ ಬಂದಿದೆ ಎಂದು ವೈದ್ಯಾಧಿಕಾರಿಗಳು ತಿಳಿಸಿದ್ದಾರೆ.

ADVERTISEMENT

ಸೋಂಕು ತಗಲಿದ 14ನೇ ದಿನದಲ್ಲಿ ರೋಗಿಗಳ ಮಾದರಿಯನ್ನು ಎರಡು ಬಾರಿ ಪರೀಕ್ಷೆ ಮಾಡಲಾಗಿತ್ತು. ಇದರಲ್ಲಿ ಕೊರೊನಾ ವೈರಸ್‌ ಪತ್ತೆಯಾಗದಿರುವುದರಿಂದ ಅವರನ್ನು ಮನೆಗೆ ಕಳುಹಿಸಲಾಗಿದೆ ಎಂದು ವೈದ್ಯರು ಹೇಳಿದ್ದಾರೆ.

ಇವನ್ನೂ ಓದಿ:

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.