ADVERTISEMENT

Covid-19 India Update: ಕೇರಳದಲ್ಲಿ 6,169 ಹೊಸ ಪ್ರಕರಣ

ಏಜೆನ್ಸೀಸ್
Published 23 ಡಿಸೆಂಬರ್ 2020, 16:19 IST
Last Updated 23 ಡಿಸೆಂಬರ್ 2020, 16:19 IST
ಮುಂಬೈ ವಿಮಾನ ನಿಲ್ದಾಣದಲ್ಲಿ ಬ್ರಿಟನ್‌ನಿಂದ ಬರುವ ಪ್ರಯಾಣಿಕರ ತಪಾಸಣೆಗಾಗಿ ಎದುರು ನೋಡುತ್ತಿರುವ ಸಿಬ್ಬಂದಿ
ಮುಂಬೈ ವಿಮಾನ ನಿಲ್ದಾಣದಲ್ಲಿ ಬ್ರಿಟನ್‌ನಿಂದ ಬರುವ ಪ್ರಯಾಣಿಕರ ತಪಾಸಣೆಗಾಗಿ ಎದುರು ನೋಡುತ್ತಿರುವ ಸಿಬ್ಬಂದಿ   

ನವದೆಹಲಿ: ಕಳೆದ 24 ಗಂಟೆಗಳಲ್ಲಿ ಮಹಾರಾಷ್ಟ್ರದಾದ್ಯಂತ 3,913 ಹೊಸ ಪ್ರಕರಣಗಳು ದಾಖಲಾಗಿದ್ದು, 93 ಮಂದಿ ಮೃತಪಟ್ಟಿದ್ದಾರೆ. ಮಹಾರಾಷ್ಟ್ರದಲ್ಲಿ ಈ ವರೆಗೆ ದಾಖಲಾದ ಒಟ್ಟು ಪ್ರಕರಣಗಳ ಸಂಖ್ಯೆ 19,06,371ಕ್ಕೆ ತಲುಪಿದೆ. 54,573 ಸಕ್ರಿಯ ಪ್ರಕರಣಗಳಿವೆ.

ಒಂದೇ ದಿನದಲ್ಲಿ ದೆಹಲಿಯಾದ್ಯಂತ 871 ಹೊಸ ಪ್ರಕರಣಗಳು ಬೆಳಕಿಗೆ ಬಂದಿದ್ದು, 18 ಮಂದಿ ಸಾವಿಗೀಡಾಗಿದ್ದಾರೆ. ಈ ವರೆಗೆ ಒಟ್ಟು 6,19,618 ಪ್ರಕರಣಗಳು ದಾಖಲಾಗಿವೆ. 6,01,268 ಕೊರೊನಾ ಸೋಂಕಿತರು ಗುಣಮುಖರಾಗಿದ್ದಾರೆ.

ತಮಿಳುನಾಡಿನಲ್ಲಿ ಹೊಸದಾಗಿ 1,066 ಪ್ರಕರಣಗಳು ಪತ್ತೆಯಾಗಿದ್ದು, 12 ಸೋಂಕಿತರು ಮೃತಪಟ್ಟಿದ್ದಾರೆ.

ADVERTISEMENT

ಕೇರಳದಲ್ಲಿ ಹೊಸದಾಗಿ 6,169 ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು 62,802 ಸಕ್ರಿಯ ಪ್ರಕರಣಗಳಿವೆ.

ದೇಶದಾದ್ಯಂತ ಕಳೆದ 24 ಗಂಟೆಗಳಲ್ಲಿ ಕೋವಿಡ್‌–19 ದೃಢಪಟ್ಟ 23,950 ಪ್ರಕರಣಗಳು ದಾಖಲಾಗಿದೆ. ಇದೇ ಅವಧಿಯಲ್ಲಿ 26,895 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, 333 ಮಂದಿ ಸಾವಿಗೀಡಾಗಿದ್ದಾರೆ.

ಮಂಗಳವಾರ 19,556 ಕೋವಿಡ್‌ ಪ್ರಕರಣಗಳು ದಾಖಲಾಗಿದ್ದವು.

ಒಟ್ಟು ಪ್ರಕರಣಗಳ ಸಂಖ್ಯೆ 1,00,99,066 ಆಗಿದೆ. ಈ ಪೈಕಿ 96,63,382 ಗುಣಮುಖರಾಗಿದ್ದರೆ, 1,46,444 ಮಂದಿ ಮೃತಪಟ್ಟಿದ್ದಾರೆ. ಪ್ರಸ್ತುತ ದೇಶದಲ್ಲಿ 2,89,240 ಸಕ್ರಿಯ ಪ್ರಕರಣಗಳಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಪ್ರಕಟಿಸಿದೆ.

ಐಸಿಎಂಆರ್‌ ಪ್ರಕಾರ, ಮಂಗಳವಾರ ಒಂದೇ ದಿನ 10,98,164 ಗಂಟಲು ದ್ರವ ಮಾದರಿಗಳನ್ನು ಕೋವಿಡ್‌–19 ಪರೀಕ್ಷೆಗೆ ಒಳಪಡಿಸಲಾಗಿದೆ. ದೇಶದಲ್ಲಿ ಒಟ್ಟು 16,42,68,721 ಮಾದರಿಗಳಿಗೆ ಕೋವಿಡ್‌ ಪರೀಕ್ಷೆ ನಡೆಸಲಾಗಿದೆ.

ಮಹಾರಾಷ್ಟ್ರದಲ್ಲಿ 59,502 ಸಕ್ರಿಯ ಪ್ರಕರಣಗಳು, ಕೇರಳದಲ್ಲಿ 61,635, ಕರ್ನಾಟಕದಲ್ಲಿ 14,012, ಉತ್ತರ ಪ್ರದೇಶದಲ್ಲಿ 16,691 ಹಾಗೂ ಪಶ್ಚಿಮ ಬಂಗಾಳದಲ್ಲಿ 16,248 ಸಕ್ರಿಯ ಪ್ರಕರಣಗಳಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.