ADVERTISEMENT

Covid-19 India Update: ಕೇರಳದಲ್ಲಿ 5,177 ಹೊಸ ಪ್ರಕರಣ

ಏಜೆನ್ಸೀಸ್
Published 24 ಡಿಸೆಂಬರ್ 2020, 15:25 IST
Last Updated 24 ಡಿಸೆಂಬರ್ 2020, 15:25 IST
ಕೊರೊನಾ ವೈರಸ್ ಸೋಂಕು ಪರೀಕ್ಷೆ (ಸಾಂದರ್ಭಿಕ ಚಿತ್ರ)
ಕೊರೊನಾ ವೈರಸ್ ಸೋಂಕು ಪರೀಕ್ಷೆ (ಸಾಂದರ್ಭಿಕ ಚಿತ್ರ)   

ನವದೆಹಲಿ: ಕಳೆದ 24 ಗಂಟೆಗಳಲ್ಲಿ ಮಹಾರಾಷ್ಟ್ರದಾದ್ಯಂತ 3,580 ಹೊಸ ಪ್ರಕರಣಗಳು ದಾಖಲಾಗಿದ್ದು, 89 ಸೋಂಕಿತರು ಪ್ರಾಣ ಕಳೆದುಕೊಂಡಿದ್ದಾರೆ. ಈ ವರೆಗೂ ಒಟ್ಟು 19,09,951 ಕೋವಿಡ್‌ ಪ್ರಕರಣಗಳು ಮಹಾರಾಷ್ಟ್ರದಲ್ಲಿ ಪತ್ತೆಯಾಗಿದ್ದು, 54,891 ಸಕ್ರಿಯ ಪ್ರಕರಣಗಳಿವೆ. 18,04,871 ಮಂದಿ ಕೋವಿಡ್‌ನಿಂದ ಚೇತರಿಸಿಕೊಂಡಿದ್ದಾರೆ.

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 1,063 ಹೊಸ ಪ್ರಕರಣಗಳು ಬೆಳಕಿಗೆ ಬಂದಿದ್ದು, 37 ಸೋಂಕಿತರು ಮೃತಪಟ್ಟಿದ್ದಾರೆ. ಈ ವರೆಗೆ ಒಟ್ಟು 6,20,681 ಕೊರೊನಾ ಸೋಂಕು ಪ್ರಕರಣಗಳು ದಾಖಲಾಗಿದ್ದು, ಅದರಲ್ಲಿ 6,02,388 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ.

ಕೇರಳದಲ್ಲಿ ಹೊಸದಾಗಿ 5,177 ಪ್ರಕರಣಗಳು ಪತ್ತೆಯಾಗಿದ್ದು, ಈ ವರೆಗೆ ದಾಖಲಾದ ಒಟ್ಟು ಪ್ರಕರಣಗಳ ಸಂಖ್ಯೆ 6,60,445ಕ್ಕೆ ತಲುಪಿದೆ. 63,155 ಸಕ್ರಿಯ ಪ್ರಕರಣಳಿವೆ. 6,60,445 ಮಂದಿ ಕೋವಿಡ್‌ನಿಂದ ಚೇತರಿಸಿಕೊಂಡಿದ್ದಾರೆ.

ADVERTISEMENT

ರಾಜಸ್ತಾನದಲ್ಲಿ ಹೊಸದಾಗಿ 1,001 ಪ್ರಕರಣಗಳು ದಾಖಲಾಗಿದ್ದು, 8 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.

ದೇಶದಾದ್ಯಂತ ಕಳೆದ 24 ಗಂಟೆಗಳಲ್ಲಿ 24,712 ಕೋವಿಡ್‌ ಪ್ರಕರಣಗಳು ದೃಢಪಟ್ಟಿದ್ದು, 312 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.

ಇದರೊಂದಿಗೆ ಸೋಂಕಿತರ ಸಂಖ್ಯೆ 1,01,23,778 ಕ್ಕೆ ಏರಿಕೆಯಾಗಿದೆ. ಆ ಪೈಕಿ 1,46,756 ಮಂದಿ ಸಾವಿಗೀಡಾಗಿದ್ದಾರೆ. ದೇಶದಲ್ಲಿ ಇತ್ತೀಚಿನ ದಿನಗಳಲ್ಲಿ ಚೇತರಿಕೆ ಪ್ರಮಾಣ ಹೆಚ್ಚಿದ್ದು, ಇದುವರೆಗೆ 96,93,173 ಮಂದಿ ಸೋಂಕಿತರು ಗುಣಮುಖರಾಗಿದ್ದಾರೆ. ಸದ್ಯ ದೇಶದಲ್ಲಿ 2,83,849 ಸಕ್ರಿಯ ಪ್ರಕರಣಗಳಿವೆ.

ಹೆಚ್ಚು ಪ್ರಕರಣಗಳನ್ನು ಹೊಂದಿರುವ ಮಹಾರಾಷ್ಟ್ರದಲ್ಲಿ 55,702, ಕೇರಳದಲ್ಲಿ 62,974, ಗುಜರಾತ್‌ನಲ್ಲಿ 11,040, ಉತ್ತರ ಪ್ರದೇಶದಲ್ಲಿ 16,378, ಮಧ್ಯಪ್ರದೇಶದಲ್ಲಿ 10,766, ಕರ್ನಾಟಕದಲ್ಲಿ 13,755 ಸಕ್ರಿಯ ಪ್ರಕರಣಗಳಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.