ADVERTISEMENT

Covid-19 India Update: ಸಕ್ರಿಯ ಪ್ರಕರಣಗಳ ಸಂಖ್ಯೆ 214 ದಿನಗಳ ಕನಿಷ್ಠ

ಪಿಟಿಐ
Published 13 ಅಕ್ಟೋಬರ್ 2021, 5:12 IST
Last Updated 13 ಅಕ್ಟೋಬರ್ 2021, 5:12 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ದೇಶದಲ್ಲಿ ಇದೇ ಮೊದಲ ಬಾರಿಗೆ ಕೋವಿಡ್– 19 ಸಕ್ರಿಯ ಪ್ರಕರಣಗಳ ಸಂಖ್ಯೆ 214 ದಿನಗಳ ಕನಿಷ್ಠಕ್ಕೆ ಇಳಿಕೆಯಾಗಿದೆ. ಸದ್ಯ 2,07,653 ಸಕ್ರಿಯ ಪ್ರಕರಣಗಳಿವೆ.

24 ಗಂಟೆಗಳ ಅವಧಿಯಲ್ಲಿ ದೇಶದಾದ್ಯಂತ 15,823 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, 226 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. ಈವರೆಗಿನ ಒಟ್ಟು ಸೋಂಕಿತರ ಸಂಖ್ಯೆ 3,40,01,743 ತಲುಪಿದೆ. ಸಾವಿನ ಸಂಖ್ಯೆ 4,51,189ಕ್ಕೆ ಏರಿಕೆಯಾಗಿದೆ. ಚೇತರಿಕೆ ಪ್ರಮಾಣ ಶೇ 98.06ರಷ್ಟಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ದೈನಂದಿನ ಹೊಸ ಪ್ರಕರಣಗಳ ಸಂಖ್ಯೆ 30,000ಕ್ಕಿಂತ ಕಡಿಮೆ ವರದಿಯಾಗುತ್ತಿರುವುದು ಇದು ಸತತ 19ನೇ ದಿನವಾಗಿದೆ.

ದೈನಂದಿನ ಪಾಸಿಟಿವಿಟಿ ಪ್ರಮಾಣ ಶೇ 1.19ರಷ್ಟಿದೆ. ಇದು ಕಳೆದ 44 ದಿನಗಳಿಂದಲೂ ಶೇ 3ಕ್ಕಿಂತ ಕೆಳಗಿದೆ. ವಾರದ ಪಾಸಿಟಿವಿಟಿ ಪ್ರಮಾಣ ಶೇ 1.46ರಷ್ಟಿದ್ದು, ಇದು ಕಳೆದ 110 ದಿನಗಳಲ್ಲೇ ಕನಿಷ್ಠವಾಗಿದೆ.

ದೇಶದಲ್ಲಿ ಈವರೆಗೆ 96.43 ಕೋಟಿ ಡೋಸ್ ಕೋವಿಡ್ ಲಸಿಕೆ ನೀಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.