ADVERTISEMENT

Covid-19 India update | ಮಹಾರಾಷ್ಟ್ರದಲ್ಲಿ ಒಂದೇ ದಿನ 6497 ಹೊಸ ಪ್ರಕರಣ

ಏಜೆನ್ಸೀಸ್
Published 13 ಜುಲೈ 2020, 16:25 IST
Last Updated 13 ಜುಲೈ 2020, 16:25 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ನವದೆಹಲಿ: ದೇಶದಾದ್ಯಂತ ಕೊರೊನಾ ವೈರಸ್‌ ಸೋಂಕು ವೇಗವಾಗಿ ಹರಡುತ್ತಿದ್ದು ಮಹಾರಾಷ್ಟ್ರದಲ್ಲಿ ಒಂದೇ ದಿನ 6497 ಪ್ರಕರಣಗಳು ಪತ್ತೆಯಾಗಿವೆ.

ದೇಶದಾದ್ಯಂತ 24 ಗಂಟೆಗಳ ಅವಧಿಯಲ್ಲಿ 28,701 ಹೊಸ ಕೋವಿಡ್–19 ಪ್ರಕರಣಗಳು ದೃಡಪಟ್ಟಿವೆ. 500 ಮಂದಿ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸೋಮವಾರ ಬೆಳಿಗ್ಗೆ ತಿಳಿಸಿದೆ.

ಇದರೊಂದಿಗೆ ದೇಶದಲ್ಲಿ ಈವರೆಗೆ ಸೋಂಕಿಗೀಡಾದವರ ಸಂಖ್ಯೆ 8,78,254 ತಲುಪಿದೆ. ಈ ಪೈಕಿ 23,174 ಮಂದಿ ಈವರೆಗೆ ಮೃತಪಟ್ಟಿದ್ದರೆ, 5,53,471 ಜನ ಗುಣಮುಖರಾಗಿದ್ದಾರೆ. ಸದ್ಯ 3,01,609 ಸಕ್ರಿಯ ಪ್ರಕರಣಗಳಿವೆ.

ADVERTISEMENT

ಮಹಾರಾಷ್ಟ್ರದಲ್ಲಿ ಹೆಚ್ಚು ಪ್ರಕರಣಗಳು ವರದಿಯಾಗುತ್ತಿವೆ. ಇಲ್ಲಿ ಕೋವಿಡ್‌–19ಗೆ ಬಲಿಯಾದವರ ಸಂಖ್ಯೆ 10 ಸಾವಿರ ದಾಟಿದೆ. ಭಾನುವಾರ ಸಂಜೆ 5 ಗಂಟೆಯಿಂದ ಸೋಮವಾರ ಸಂಜೆ 5 ಗಂಟೆಯವರೆಗೂ 6497 ಹೊಸ ಪ್ರಕರಣಗಳು ದಾಖಲಾಗಿವೆ.

ಇಂದು ಸಂಜೆಯ ವೇಳೆಗೆ ಒಂದೇ ದಿನದಲ್ಲಿ ಕರ್ನಾಟಕದಲ್ಲಿ 2738, ದೆಹಲಿಯಲ್ಲಿ 1246, ಪಂಜಾಬ್‌ನಲ್ಲಿ 355 ಹೊಸ ಪ್ರಕರಣಗಳು ಪತ್ತೆಯಾಗಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.