ADVERTISEMENT

ಕೋವಿಡ್ 19 ಸೋಂಕು: ಹೈದರಾಬಾದ್‌ನಲ್ಲಿ ಮತ್ತೆ ಎರಡು ಪ್ರಕರಣ ಪತ್ತೆ

​ಪ್ರಜಾವಾಣಿ ವಾರ್ತೆ
Published 4 ಮಾರ್ಚ್ 2020, 13:09 IST
Last Updated 4 ಮಾರ್ಚ್ 2020, 13:09 IST
ಹೈದರಾಬಾದ್‌ನ ಗಾಂಧಿ ಆಸ್ಪತ್ರೆಯಲ್ಲಿನ ದೃಶ್ಯ
ಹೈದರಾಬಾದ್‌ನ ಗಾಂಧಿ ಆಸ್ಪತ್ರೆಯಲ್ಲಿನ ದೃಶ್ಯ    

ಹೈದರಾಬಾದ್:ಹೈದರಾಬಾದ್‌ನಲ್ಲಿ ಇಬ್ಬರು ವ್ಯಕ್ತಿಗಳಿಗೆ ಕೋವಿಡ್ 19 ಸೋಂಕು ತಗಲಿರುವುದು ಪತ್ತೆಯಾಗಿದೆ ಎಂದು ತೆಲಂಗಾಣದ ಸಾರ್ವಜನಿಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೇಳಿದೆ. ಈ ಹಿಂದೆ ಒಬ್ಬ ವ್ಯಕ್ತಿಗೆ ಸೋಂಕು ತಗಲಿರುವುದು ದೃಢಪಟ್ಟಿತ್ತು.

ಬುಧವಾರ ಪತ್ತೆಯಾದ ಪ್ರಕರಣಗಳಲ್ಲಿ ಓರ್ವ ವ್ಯಕ್ತಿ ನಗದರ ಟೆಕ್ ಕಂಪನಿಯೊಂದರ ಉದ್ಯೋಗಿಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಆ ವ್ಯಕ್ತಿ ಕಾರ್ಯ ನಿರ್ವಹಿಸುತ್ತಿದ್ದ ಕಂಪನಿಯ ಎರಡು ಕ್ಯಾಂಪಸ್‌ಗಳಲ್ಲಿನ ನೌಕರರನ್ನು ಮನೆಗೆ ಕಳುಹಿಸಲಾಗಿದೆ.

ಇತ್ತೀಚೆಗೆ ಇಟಲಿಗೆ ಹೋಗಿ ಬಂದಿದ್ದ ವ್ಯಕ್ತಿಗೆ ಈ ಸೋಂಕು ತಗಲಿದೆ. ಈ ಸೋಂಕು ಅವರೊಂದಿಗೆಸಂಪರ್ಕದಲ್ಲಿದ್ದ ಮತ್ತೊಬ್ಬವ್ಯಕ್ತಿಗೂ ಹರಡಿದೆ ಎಂದು ಹೇಳಲಾಗಿದೆ.

ಇವರಿಬ್ಬರನ್ನೂ ಹೈದರಾಬಾದ್‌ನ ಗಾಂಧಿ ಆಸ್ಪತ್ರೆಯಲ್ಲಿ ಪ್ರಾಥಮಿಕ ತಪಾಸಣೆಗೊಳಪಡಿಸಲಾಗಿತ್ತು. ಹೆಚ್ಚಿನ ಪರೀಕ್ಷೆಗಾಗಿ ಸ್ಯಾಂಪಲ್‌ಗಳನ್ನು ಪುಣೆಯ ಎನ್‌ವಿಎಲ್ ಲ್ಯಾಬ್‌ಗೆ ಕಳುಹಿಸಲಾಗಿದೆ. ಇದರ ಫಲಿತಾಂಶ ನಾಳೆ ಲಭಿಸಲಿದೆಎಂದು ಆರೋಗ್ಯ ಇಲಾಖೆ ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.