ADVERTISEMENT

ಫಲಿಸಿದೆ 3T ಸೂತ್ರ, ದೇಶದಲ್ಲೇ 13ನೇ ಸ್ಥಾನದಲ್ಲಿ ಕರ್ನಾಟಕ: ಸಚಿವ ಸುಧಾಕರ್

​ಪ್ರಜಾವಾಣಿ ವಾರ್ತೆ
Published 9 ಏಪ್ರಿಲ್ 2020, 5:34 IST
Last Updated 9 ಏಪ್ರಿಲ್ 2020, 5:34 IST
ಸಚಿವ ಡಾ.ಸುಧಾಕರ್ ಕೆ.
ಸಚಿವ ಡಾ.ಸುಧಾಕರ್ ಕೆ.   

ಬೆಂಗಳೂರು: 'ತ್ರೀ ಟಿ' ಕಾರ್ಯತಂತ್ರ ವೈದ್ಯರ ಪರಿಶ್ರಮದಿಂದ ಕರ್ನಾಟಕದಲ್ಲಿ ಕೊರೊನಾ ಸೋಂಕು ಕಡಿಮೆ ಪ್ರಮಾಣದಲ್ಲಿದ್ದು ರಾಷ್ಟ್ರದಲ್ಲಿಯೇ 13 ನೇ ಸ್ಥಾನದಲ್ಲಿದ್ದೇವೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ತಿಳಿಸಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಟ್ರೇಸಿಂಗ್, ಟೆಸ್ಟಿಂಗ್ ಮತ್ತು ಟ್ರೀಟ್‌‌ಮೆಂಟ್ (ಪತ್ತೆಹಚ್ಚುವಿಕೆ, ಪರೀಕ್ಷೆ ಮತ್ತು ಚಿಕಿತ್ಸೆ) ಮೂರು ವಿಧಾನಗಳನ್ನು ಅನುಸರಿಸುತ್ತಿರುವ ಸಾವಿರಾರು ಮಂದಿ ವೈದ್ಯರ ಕಠಿಣ ಪರಿಶ್ರಮ ಮತ್ತು ನಿಖರವಾದ ಯೋಜನೆಯಿಂದ ಇದು ಸಾಧ್ಯವಾಗುತ್ತಿದೆ. ಇದರಿಂದಾಗಿ ಕೋವಿಡ್19 ನಿಯಂತ್ರಣದಲ್ಲಿಡಲು ಸಹಾಯ ಮಾಡುತ್ತಿದೆ. ಇದು ದೇಶದಲ್ಲಿಯೇ ಕರ್ನಾಟಕ 13ನೇ ಸ್ಥಾನದಲ್ಲಿರಲು ಸಾಧ್ಯವಾಗಿಸಿದೆ ಎಂದು ಅವರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT