ADVERTISEMENT

ಕೇರಳ: ಕೊರೊನಾ ವೈರಸ್ ರೋಗಿ ಭಾಗಶಃ ಗುಣಮುಖ, ಒಂದು ಪರೀಕ್ಷೆ ಬಾಕಿ

ಏಜೆನ್ಸೀಸ್
Published 10 ಫೆಬ್ರುವರಿ 2020, 6:05 IST
Last Updated 10 ಫೆಬ್ರುವರಿ 2020, 6:05 IST
ಕೇರಳದಲ್ಲಿ ಕೊರೊನಾ ವೈರಸ್ ಸೋಂಕು
ಕೇರಳದಲ್ಲಿ ಕೊರೊನಾ ವೈರಸ್ ಸೋಂಕು    

ತಿರುವನಂತಪುರಂ(ಕೇರಳ): ಮೊದಲ ಕೊರೊನಾ ವೈರಸ್ ಸೋಂಕು ತಗುಲಿದ ರೋಗಿ ಈಗ ಗುಣಮುಖರಾಗುತ್ತಿದ್ದು, ಆಸ್ಪತ್ರೆಯಿಂದ ಬಿಡುಗಡೆಯಾಗಲು ಒಂದು ರಕ್ತ ಪರೀಕ್ಷೆ ಮಾತ್ರ ಬಾಕಿ ಇದೆ ಎಂದುಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಜನವರಿ 30ರಂದು ಚೀನಾದ ವುಹಾನ್ ನಗರದಿಂದ ಕೇರಳಕ್ಕೆಆಗಮಿಸಿದ ವಿದ್ಯಾರ್ಥಿನಿಯಲ್ಲಿ ಕೊರೊನಾ ವೈರಸ್ ತಗುಲಿರುವುದು ಖಚಿತಪಟ್ಟಿತ್ತು. ಕೂಡಲೆ ವಿದ್ಯಾರ್ಥಿನಿಯನ್ನುಸರ್ಕಾರಿ ಮೆಡಿಕಲ್ ಕಾಲೇಜು ಆಸ್ಪತ್ರೆಗೆದಾಖಲು ಮಾಡಿಕೊಂಡು ಚಿಕಿತ್ಸೆ ನೀಡಲಾಗುತ್ತಿದೆ.

ಫೆಬ್ರವರಿ 8ರಂದು ಒಟ್ಟು ಐದು ರಕ್ತದ ಮಾದರಿಗಳನ್ನು ಸಂಗ್ರಹಿಸಿ ಪುಣೆಯ ರಾಷ್ಟ್ರೀಯ ವೈರಾಲಜಿ ಸಂಸ್ಥೆಗೆ ಕಳುಹಿಸಲಾಗಿದೆ. ನಾಲ್ಕರಲ್ಲಿ ನೆಗೆಟಿವ್ ಎಂದು ತಿಳಿದುಬಂದಿದ್ದು, ಉಳಿದ ಒಂದು ಪರೀಕ್ಷೆ ಮಾತ್ರ ಬಾಕಿ ಇದೆ. ಈ ವರದಿಯಲ್ಲಿ ನೆಗೆಟಿವ್ ಎಂದು ಕಂಡು ಬಂದರೆ ವಿದ್ಯಾರ್ಥಿನಿಯನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗುವುದು ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

ADVERTISEMENT

ಪ್ರಸ್ತುತ ಕೇರಳದಲ್ಲಿ 3114 ಮಂದಿಯಲ್ಲಿ ಕೊರೊನಾ ವೈರಸ್ ಸೋಂಕಿನಗುಣಲಕ್ಷಣಗಳು ಕಂಡುಬಂದಿದ್ದು ಆರೋಗ್ಯ ಇಲಾಖೆ ಇವರ ಮೇಲೆ ನಿಗಾ ವಹಿಸಿದೆ. 3099 ಮಂದಿಯನ್ನು ಮನೆಯಿಂದ ಹೊರ ಹೋಗದಂತೆ ತಿಳಿಸಲಾಗಿದೆ. ಸೋಂಕು ತೀವ್ರವಾಗಿರುವ 45 ಮಂದಿಯನ್ನು ಆಸ್ಪತ್ರೆಗೆ ದಾಖಲಿಸಿಕೊಂಡು ಚಿಕಿತ್ಸೆ ನೀಡಲಾಗುತ್ತಿದೆ.

ಕಾಸರಗೋಡು, ತ್ರಿಸೂರ್ ಹಾಗೂ ಅಲಪ್ಪುಳಗಳಲ್ಲಿ ಒಂದೊಂದು ಪ್ರಕರಣಗಳು ವರದಿಯಾಗಿದ್ದವು. ಈ ರೋಗಿಗಳೂ ಸೇರಿದಂತೆ ಇಲ್ಲಿಯವರೆಗೆ 330 ರಕ್ತದ ಮಾದರಿಗಳನ್ನು ಪುಣೆಯ ರಾಷ್ಟ್ರೀಯ ವೈರಾಲಜಿ ಸಂಸ್ಥೆಗೆ ಕಳುಹಿಸಿಕೊಡಲಾಗಿದೆ. ಅವುಗಳಲ್ಲಿ 288 ನೆಗೆಟಿವ್ ಎಂದು ವರದಿ ಬಂದಿವೆ. ಉಳಿದ ವರದಿಗಾಗಿ ಕಾಯುತ್ತಿದ್ದೇವೆ ಎಂದು ಕೇರಳ ಆರೋಗ್ಯ ಸಚಿವೆ ಶೈಲಜಾ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಇದಲ್ಲದೆ, ಕೇರಳದಲ್ಲಿ ರಾಜ್ಯ ವಿಪತ್ತು ಘೋಷಣೆ ಪ್ರಯುಕ್ತ ರಾಜ್ಯದಾದ್ಯಂತ ನೀಡಲಾಗಿದ್ದ ಎಚ್ಚರಿಕೆಯನ್ನು ಹಿಂತೆಗೆದುಕೊಳ್ಳಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.