ADVERTISEMENT

Covid-19 India Update | ಒಂದೇ ದಿನ 29,429 ಹೊಸ ಪ್ರಕರಣ, 582 ಸಾವು

ಏಜೆನ್ಸೀಸ್
Published 15 ಜುಲೈ 2020, 4:47 IST
Last Updated 15 ಜುಲೈ 2020, 4:47 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶದಾದ್ಯಂತ 29,429 ಹೊಸ ಕೋವಿಡ್‌ ಪ್ರಕರಣಗಳು ಪತ್ತೆಯಾಗಿದ್ದು, 582 ಮಂದಿ ಮೃತಪಟ್ಟಿದ್ದಾರೆ.

ಇದರೊಂದಿಗೆ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 9,36,181 ಕ್ಕೆ ಏರಿಕೆಯಾಗಿದೆ. ಜೊತೆಗೆ 5,92,032 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಇದುವರೆಗೆ ಸೋಂಕಿಗೆ ತುತ್ತಾದವರ ಸಂಖ್ಯೆ 24,309 ಕ್ಕೆ ತಲುಪಿದೆ. ಸದ್ಯ ದೇಶದಲ್ಲಿ 3,19,840 ಸಕ್ರಿಯ ಪ್ರಕರಣಗಳು ಇವೆ.

ADVERTISEMENT

ಮಹಾರಾಷ್ಟ್ರದಲ್ಲಿ 2.61 ಲಕ್ಷ ಮಂದಿಗೆ ಸೋಂಕಿಗೆ ತಗುಲಿದ್ದು, 1.45 ಲಕ್ಷ ಮಂದಿ ಗುಣಮುಖರಾಗಿದ್ದಾರೆ. 10,482 ಮಂದಿ ಮೃತಪಟ್ಟಿದ್ದಾರೆ.

ತಮಿಳುನಾಡಿನಲ್ಲಿ 1.43 ಲಕ್ಷ ಮಂದಿಗೆ ಸೋಂಕು ತಗುಲಿದೆ. 92,567 ಮಂದಿ ಗುಣಮುಖರಾಗಿದ್ದು, 2, 032 ಮಂದಿ ಸಾವಿಗೀಡಾಗಿದ್ದಾರೆ.ಇತ್ತ ದೆಹಲಿಯಲ್ಲಿ 1.14 ಲಕ್ಷ ಜನರಿಗೆ ಸೋಂಕು ತಗುಲಿದೆ. 91, 312 ಮಂದಿ ಚೇತರಿಸಿಕೊಂಡಿದ್ದು, 3,411 ಮಂದಿ ಕೊನೆಯುಸಿರೆಳೆದಿದ್ದಾರೆ.

ಕೋವಿಡ್‌ ಸೋಂಕಿತರ ಚೇತರಿಕೆ ಪ್ರಮಾಣ ಶೇಕಡ 63.20 ರಷ್ಟು ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಇನ್ನಷ್ಟು...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.