ADVERTISEMENT

ಕೊರೊನಾ ಸೋಂಕು: ದೇಶದಲ್ಲಿ 402 ಮಂದಿ ಗುಣಮುಖ, 773 ಹೊಸ ಪ್ರಕರಣ

​ಪ್ರಜಾವಾಣಿ ವಾರ್ತೆ
Published 8 ಏಪ್ರಿಲ್ 2020, 11:54 IST
Last Updated 8 ಏಪ್ರಿಲ್ 2020, 11:54 IST
ಕೊರೊನಾ ಸೋಂಕಿತರ ಕುರಿತು ಮಾಹಿತಿ ನೀಡುತ್ತಿರುವ ಅಧಿಕಾರಿಗಳು
ಕೊರೊನಾ ಸೋಂಕಿತರ ಕುರಿತು ಮಾಹಿತಿ ನೀಡುತ್ತಿರುವ ಅಧಿಕಾರಿಗಳು    

ನವದೆಹೆಲಿ: ದೇಶದಲ್ಲಿ ಕೊರೊನಾ ಸೋಂಕಿತರಾಗಿದ್ದವರ ಪೈಕಿ ಈವರೆಗೂ 402 ಮಂದಿ ಗುಣಮುಖರಾಗಿ ಮನೆಗಳಿಗೆ ತೆರಳಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಜಂಟಿ ಕಾರ್ಯದರ್ಶಿ ಲವ ಅಗರ್‌ವಾಲ್‌ ಬುಧವಾರ ಮಾಧ್ಯಮಗಳಿಗೆ ಹೇಳಿದ್ದಾರೆ.

ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ ಕೋವಿಡ್‌–19 ದೃಢಪಟ್ಟ 773 ಪ್ರಕರಣಗಳು ದಾಖಲಾಗಿದ್ದು, ಸೋಂಕಿನಿಂದ 32 ಮಂದಿ ಸಾವಿಗೀಡಾಗಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

773 ಹೊಸ ಪ್ರಕರಣಗಳು ದಾಖಲಾಗುವ ಮೂಲಕ ದೇಶದಲ್ಲಿ ಒಟ್ಟು ಕೊರೊನಾ ಸೋಂಕು ಪ್ರಕರಣಗಳು 5,194 ಮುಟ್ಟಿದೆ. ಈವರೆಗೂ 149 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಎಚ್‌ಸಿಕ್ಯುಗೆ (ಹೈಡ್ರಾಕ್ಸಿಕ್ಲೋರೊಕ್ವಿನ್‌) ಇಂದು ಹಾಗೂ ಮುಂದೆಂದಿಗೂ ಕೊರತೆ ಉಂಟಾಗುವುದಿಲ್ಲ ಎಂದು ಲವ ಅಗರ್‌ವಾಲ್‌ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ADVERTISEMENT

ಈವರೆಗೂ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್‌) 1,21,271 ಕೋಡಿಡ್‌–19 ಪರೀಕ್ಷೆಗಳನ್ನು ನಡೆಸಿರುವುದಾಗಿ ಐಸಿಎಂಆರ್‌ ಮುಖ್ಯಸ್ಥ ಆರ್‌.ಗಂಗಖೇಡ್ಕರ್‌ ಹೇಳಿದ್ದಾರೆ.

ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ₹1,000ದಿಂದ ₹6,000 ನಗದು ಸಹಕಾರ ಸಿಗಲಿದೆ ಎಂದು ಕೇಂದ್ರ ಗೃಹ ಸಚಿವಾಲಯದ ಜಂಟಿ ಕಾರ್ಯದರ್ಶಿ ಹೇಳಿದ್ದಾರೆ. ಎಲ್ಲ ರಾಜ್ಯಗಳು ಹಾಗೂ ಕೇಂದ್ರಾಡಳಿ ಪ್ರದೇಶಗಳಲ್ಲಿನ ಕಟ್ಟಡ ಕಾರ್ಮಿಕರಿಗೆ ನಗದು ಸಹಕಾರ ಸಿಗಲಿದೆ. 2 ಕೋಟಿ ಮಂದಿ ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ₹3,000 ಕೋಟಿ ಬಿಡುಗಡೆಯಾಗಲಿದೆ ಎಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.