ADVERTISEMENT

Covid-19 India Update: ಮಹಾರಾಷ್ಟ್ರ, ತಮಿಳುನಾಡಿನಲ್ಲಿ ಲಾಕ್‌ಡೌನ್ ವಿಸ್ತರಣೆ

ಏಜೆನ್ಸೀಸ್
Published 31 ಆಗಸ್ಟ್ 2020, 15:36 IST
Last Updated 31 ಆಗಸ್ಟ್ 2020, 15:36 IST
   

ನವದೆಹಲಿ: ದೇಶದಾದ್ಯಂತ ಅನ್‌ಲಾಕ್ 4.0 ಪ್ರಗತಿಯಲ್ಲಿರುವ ನಡುವೆಯೇ ಮಹಾರಾಷ್ಟ್ರ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಲ್ಲಿ ಸೆಪ್ಟೆಂಬರ್ 30ರ ವರೆಗೆ ಲಾಕ್‌ಡೌನ್‌ ವಿಸ್ತರಣೆ ಮಾಡಲಾಗಿದೆ.

ಕೋಲ್ಕತ್ತದಲ್ಲಿ ಮೆಟ್ರೊ ರೈಲು ಸೇವೆಯು ಸೆಪ್ಟೆಂಬರ್ 8ರಿಂದ ಹಂತ ಹಂತವಾಗಿ ಆರಂಭವಾಗಲಿದೆ ಎನ್ನಲಾಗಿದೆ. ಮಹಾರಾಷ್ಟ್ರದಲ್ಲಿ ಲಾಕ್‌ಡೌನ್ ವಿಸ್ತರಿಸಲಾಗಿದ್ದರೂ ಅಂತರ ಜಿಲ್ಲಾ ಸರಕು ಸಾಗಾಟ, ಸಂಚಾರಕ್ಕೆ ಅನುಮತಿ ನೀಡಲಾಗಿದೆ. ಖಾಸಗಿ ಬಸ್‌ಗಳ ಮತ್ತು ಮಿನಿ ಬಸ್‌ಗಳ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ.

ತಮಿಳುನಾಡಿನಲ್ಲಿ 5,956 ಹೊಸ ಪ್ರಕರಣಗಳು ಸೋಮವಾರ ದೃಢಪಟ್ಟಿದ್ದು, 91 ಮಂದಿ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಈವರೆಗೆ ಸೋಂಕು ತಗುಲಿದವರ ಸಂಖ್ಯೆ 4,28,041ಕ್ಕೆ ತಲುಪಿದೆ. ಸಾವಿನ ಸಂಖ್ಯೆ 7,322ಕ್ಕೆ ಏರಿಕೆಯಾಗಿದೆ.

ADVERTISEMENT

ಗುಜರಾತ್‌ನಲ್ಲಿ 1,280 ಹೊಸ ಪ್ರಕರಣಗಳು ಪತ್ತೆಯಾಗುವುದರೊಂದಿಗೆ ಈವರೆಗೆ ಸೋಂಕು ತಗುಲಿದವರ ಸಂಖ್ಯೆ 96,435 ತಲುಪಿದೆ. ಈವರೆಗೆ 3,022 ಜನ ಅಸುನೀಗಿದ್ದಾರೆ. ಕರ್ನಾಟಕದಲ್ಲಿ ಹೊಸದಾಗಿ 6,495 ಪ್ರಕರಣಗಳು ದೃಢಪಟ್ಟಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.