ADVERTISEMENT

ಮನೆ ಬಾಗಿಲಿಗೆ ಮದ್ಯ ಮಾರಾಟ: ಮಹಾರಾಷ್ಟ್ರ ಸರ್ಕಾರ ಆದೇಶ

ಪಿಟಿಐ
Published 13 ಮೇ 2020, 1:43 IST
Last Updated 13 ಮೇ 2020, 1:43 IST
ಅಂಗಡಿಗಳ ಎದುರು ಜನರು ಗುಂಪು ಸೇರುವುದನ್ನು ತಪ್ಪಿಸುವ ಸಲುವಾಗಿ ಮನೆ ಬಾಗಿಲಿಗೆ ಮದ್ಯ ಮಾರಾಟ ಮಾಡಲು ಮಹಾರಾಷ್ಟ್ರ ಸರ್ಕಾರ ಆದೇಶ ನೀಡಿದೆ
ಅಂಗಡಿಗಳ ಎದುರು ಜನರು ಗುಂಪು ಸೇರುವುದನ್ನು ತಪ್ಪಿಸುವ ಸಲುವಾಗಿ ಮನೆ ಬಾಗಿಲಿಗೆ ಮದ್ಯ ಮಾರಾಟ ಮಾಡಲು ಮಹಾರಾಷ್ಟ್ರ ಸರ್ಕಾರ ಆದೇಶ ನೀಡಿದೆ   

ಮುಂಬೈ: ಅಂಗಡಿಗಳ ಎದುರು ಜನರು ಗುಂಪು ಸೇರುವುದನ್ನು ತಪ್ಪಿಸುವ ಸಲುವಾಗಿ ಮನೆ ಬಾಗಿಲಿಗೆ ಮದ್ಯ ಮಾರಾಟ ಮಾಡಲು ಮಹಾರಾಷ್ಟ್ರ ಸರ್ಕಾರ ಮಂಗಳವಾರ ಆದೇಶ ನೀಡಿದೆ.

ಆದಾಗ್ಯೂ, ಮಾರ್ಗಸೂಚಿಗಳನ್ನು ಸಿದ್ಧಪಡಿಸಿದ ಬಳಿಕವಷ್ಟೇ ಈ ಆದೇಶ ಜಾರಿಗೆ ಬರಲಿದೆ. ಒಂದೆರಡು ದಿನಗಳಲ್ಲಿ ಮಾರ್ಗಸೂಚಿ ಸಿದ್ಧವಾಗಲಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಂಗಡಿಗಳ ಎದುರು ಜನ ಗುಂಪುಗೂಡುವುದು ಹಾಗೂ ಕೊರೊನಾ ವೈರಸ್ ಹರಡುವುದನ್ನು ತಡೆಯುವ ಸಲುವಾಗಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ.

ಹಣ ಪಾವತಿ ವಿಧಾನವನ್ನು ಮಾರಾಟಗಾರ ಮತ್ತು ಗ್ರಾಹಕರೇ ನಿರ್ಧರಿಸಿಕೊಳ್ಳಬೇಕು. ಒಂದು ಬಾರಿಗೆ ಭಾರತೀಯ ತಯಾರಿಕಾ ಮದ್ಯದ 12 ಬಾಟಲ್‌ಗಳನ್ನು ಖರೀದಿಸಬಹುದಾಗಿದೆ ಎಂದೂ ಅವರು ತಿಳಿಸಿದ್ದಾರೆ.

ADVERTISEMENT

ಲಾಕ್‌ಡೌನ್ ಸಂದರ್ಭದಲ್ಲಿ ಮನೆ ಬಾಗಲಿಗೇ ಮದ್ಯ ವಿತರಿಸುವ ಬಗ್ಗೆ ರಾಜ್ಯ ಸರ್ಕಾರಗಳು ಚಿಂತನೆ ನಡೆಸಬಹುದು ಎಂದು ಸುಪ್ರೀಂ ಕೋರ್ಟ್ ಇತ್ತೀಚೆಗೆ ಸಲಹೆ ನೀಡಿತ್ತು. ಕೊರೊನಾ ಹರಡುವಿಕೆ ತಡೆಯಲು ಅಂತರ ಕಾಯ್ದುಕೊಳ್ಳುವ ನಿಯಮ ಪಾಲಿಸುವ ನಿಟ್ಟಿನಲ್ಲಿ ರಾಜ್ಯಗಳು ಪರೋಕ್ಷ ಮದ್ಯ ಮಾರಾಟ ಅಥವಾ ಮನೆ ಬಾಗಿಲಿಗೆ ತಲುಪಿಸುವ ಬಗ್ಗೆ ಗಮನಹರಿಸಬಹುದು ಎಂದು ಸರ್ವೋಚ್ಚ ನ್ಯಾಯಾಲಯ ಹೇಳಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.