ADVERTISEMENT

ಕೊರೊನಾ ವೈರಸ್: ದೇಶದಲ್ಲಿ ಮೃತರ ಸಂಖ್ಯೆ 19, ಸೋಂಕು ಪೀಡಿತರು 740ಕ್ಕೆ ಏರಿಕೆ

ಏಜೆನ್ಸೀಸ್
Published 27 ಮಾರ್ಚ್ 2020, 8:02 IST
Last Updated 27 ಮಾರ್ಚ್ 2020, 8:02 IST
   

ನವದೆಹಲಿ: ದೇಶದಾದ್ಯಂತ ಕೊರೊನಾ ವೈರಸ್ (ಕೋವಿಡ್–19) ಸೊಂಕಿಗೆ ಮೃತಪಟ್ಟವರಸಂಖ್ಯೆ ಶುಕ್ರವಾರ ಮಧ್ಯಾಹ್ನದ ವೇಳೆಗೆ 19ಕ್ಕೆ ಏರಿಕೆಯಾಗಿದೆ. ಸೋಂಕುಪೀಡಿತರ ಸಂಖ್ಯೆ 740 ತಲುಪಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಂಕಿಅಂಶಗಳಿಂದ ತಿಳಿದುಬಂದಿದೆ.

ತುಮಕೂರಿನ ಜಿಲ್ಲಾಸ್ಪತ್ರೆಯಲ್ಲಿ ಕೊರೊನಾ ವೈರಸ್ ಸೋಂಕಿಗೆ ವ್ಯಕ್ತಿ ಬಲಿಯಾಗಿದ್ದಾರೆಎಂದು ಜಿಲ್ಲಾಧಿಕಾರಿ ರಾಕೇಶ್ ಕುಮಾರ್ ಮಾಹಿತಿ ನೀಡಿದ್ದಾರೆ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಇಂದು ಹೊಸದಾಗಿ 3 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಸೋಂಕುಪೀಡಿತರ ಒಟ್ಟು ಸಂಖ್ಯೆ 39 ತಲುಪಿದೆ. ಆಂಧ್ರ ಪ್ರದೇಶದಲ್ಲಿ ಒಂದುಕೋವಿಡ್ ಪ್ರಕರಣದೃಢಪಟ್ಟಿದ್ದು, ರಾಜ್ಯದಲ್ಲಿಸೋಂಕುಪೀಡಿತರ ಒಟ್ಟು ಸಂಖ್ಯೆ 12 ಆಗಿದೆ. ತಮಿಳುನಾಡಿನಲ್ಲಿ ಹೊಸದಾಗಿ 6 ಪ್ರಕರಣಗಳು ದೃಢಪಟ್ಟಿವೆ.

ತೆಲಂಗಾಣ ಮತ್ತು ಒಡಿಶಾಗಳಲ್ಲಿ ಇಂದು ತಲಾ ಒಂದು ಪ್ರಕರಣ ದೃಢಪಟ್ಟಿದೆ. ಒಡಿಶಾದ ಭುವನೇಶ್ವರದಲ್ಲಿ 60 ವರ್ಷ ವಯಸ್ಸಿನ ವೃದ್ಧರೊಬ್ಬರಿಗೆ ಸೋಂಕು ತಗುಲಿರುವುದು ಖಚಿತಪಟ್ಟಿದೆ. ತೆಲಂಗಾಣದ 45 ವರ್ಷ ವಯಸ್ಸಿನ ವ್ಯಕ್ತಿಯಲ್ಲಿ ಸೋಂಕು ದೃಢಪಟ್ಟಿದ್ದು, ಒಟ್ಟಾರೆಯಾಗಿ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 45 ಆಗಿದೆ.

ಈ ಮಧ್ಯೆ, ಮಹಾರಾಷ್ಟ್ರದ ಪುಣೆ ಬಳಿಯ ಪಿಂಪ್ರಿ–ಚಿಂಚ್‌ವಾಡ್‌ನಲ್ಲಿ ಕೊರೊನಾ ಶಂಕೆಯಿಂದ ಆಸ್ಪತ್ರೆಗೆ ದಾಖಲಾಗಿದ್ದ ಮೂವರಿಗೆ ಸೋಂಕು ತಗುಲಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈವರೆಗೆ ಪುಣೆಯಲ್ಲಿ 32 ಜನರಲ್ಲಿ ಕೊರೊನಾ ದೃಢಪಟ್ಟಿದ್ದು, ಆ ಪೈಕಿ 5 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ಮಹಾರಾಷ್ಟ್ರದಲ್ಲಿ ಕೊರೊನಾದಿಂದಾಗಿ ಈವರೆಗೆ 5 ಮಂದಿ ಮೃತಪಟ್ಟಿದ್ದಾರೆ. ದೇಶದಲ್ಲಿ ಸೋಂಕು ಪ್ರಕರಣಗಳ ಏರಿಕೆ ದರ ಸ್ಥಿರವಾಗಿದೆ. ದೇಶದಲ್ಲಿ ಸೋಂಕು ಈಗಲೂ ಎರಡನೇ ಹಂತದಲ್ಲಿಯೇ ಇದೆ ಎಂದು ಕೇಂದ್ರ ಸರ್ಕಾರ ಪ್ರತಿಪಾದಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.