ADVERTISEMENT

ಭಾರತದ ಶೇ. 88 ಕ್ಕಿಂತ ಹೆಚ್ಚು ವಯಸ್ಕರಿಗೆ ಕೋವಿಡ್ ಲಸಿಕೆ: ಕೇಂದ್ರ ಆರೋಗ್ಯ ಸಚಿವ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 28 ಮೇ 2022, 11:44 IST
Last Updated 28 ಮೇ 2022, 11:44 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ಭಾರತದ ಶೇ. 88 ರಷ್ಟು ವಯಸ್ಕರಿಗೆ ಕೋವಿಡ್ ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವ ಮನುಸುಖ್‌ ಮಾಂಡವೀಯ ಶನಿವಾರ ಹೇಳಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಅವರು, ‘ಭಾರತದ ಶೇ 88 ರಷ್ಟು ವಯಸ್ಕರರು ಕೋವಿಡ್‌ ಲಸಿಕೆ ಹಾಕಿಸಿಕೊಂಡಿದ್ದಾರೆ. ಲಸಿಕೆ ಹಾಕಿಸಿಕೊಂಡ ನಂತರವೂ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಿ’ ಎಂದು ತಿಳಿಸಿದ್ದಾರೆ.

ಆರೋಗ್ಯ ಸಚಿವಾಲಯದ ವರದಿಯ ಪ್ರಕಾರ, ಇದುವರೆಗೆ 18-44 ವರ್ಷ ವಯಸ್ಸಿನವರಿಗೆ ಒಟ್ಟು 55,70,67,459 ಮೊದಲ ಲಸಿಕೆ ಡೋಸ್‌ಗಳು ಮತ್ತು 48,93,11,452 ಎರಡನೇ ಡೋಸ್‌ಗಳನ್ನು ನೀಡಲಾಗಿದೆ.

ದೇಶದಾದ್ಯಂತ ಕಳೆದ 24 ಗಂಟೆಗಳಲ್ಲಿ 2,685 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, 33 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ADVERTISEMENT

ಇದರೊಂದಿಗೆ ಸೋಂಕಿತರ ಸಂಖ್ಯೆ 4,31,50,215 ಕ್ಕೆ ಏರಿಕೆಯಾಗಿದೆ. ಆ ಪೈಕಿ 5,24,572 ಮಂದಿ ಸಾವಿಗೀಡಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.