ADVERTISEMENT

Covid-19 India Update: ಮಹಾರಾಷ್ಟ್ರದಲ್ಲಿ ಹೆಚ್ಚಾಯ್ತು ಕೊರೊನಾ ವೈರಸ್ ಸೋಂಕು

ಏಜೆನ್ಸೀಸ್
Published 16 ಫೆಬ್ರುವರಿ 2021, 4:55 IST
Last Updated 16 ಫೆಬ್ರುವರಿ 2021, 4:55 IST
ಮುಂಬೈನ ಠಾಣೆ ಜಿಲ್ಲೆಯಲ್ಲಿ ಲಸಿಕೆ ಪಡೆಯುತ್ತಿರುವ ಆರೋಗ್ಯ ಸಿಬ್ಬಂದಿ
ಮುಂಬೈನ ಠಾಣೆ ಜಿಲ್ಲೆಯಲ್ಲಿ ಲಸಿಕೆ ಪಡೆಯುತ್ತಿರುವ ಆರೋಗ್ಯ ಸಿಬ್ಬಂದಿ   

ನವದೆಹಲಿ: ದೇಶದಾದ್ಯಂತ ಕಳೆದ 24 ಗಂಟೆಗಳಲ್ಲಿ ಕೋವಿಡ್‌–19 ದೃಢಪಟ್ಟ 9,121 ಪ್ರಕರಣಗಳು ದಾಖಲಾಗಿವೆ. ಇದೇ ಅವಧಿಯಲ್ಲಿ ಸೋಂಕಿನಿಂದ 81 ಮಂದಿ ಸಾವಿಗೀಡಾಗಿರುವುದು ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿಯಿಂದ ತಿಳಿದು ಬಂದಿದೆ.

ಒಟ್ಟು 1,09,25,710 ಪ್ರಕರಣಗಳು ದಾಖಲಾಗಿದ್ದು, ಈ ಪೈಕಿ 1,06,33,025 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಈವರೆಗೂ 1,55,813 ಮಂದಿ ಸಾವಿಗೀಡಾಗಿದ್ದಾರೆ. ಪ್ರಸ್ತುತ ದೇಶದ ವಿವಿಧ ಭಾಗಗಳಲ್ಲಿ 1,36,872 ಮಂದಿ ಕೋವಿಡ್‌ಗೆ ಚಿಕಿತ್ಸೆ ಪಡೆಯುತ್ತಿದ್ದಾರೆ.

ದೇಶದಲ್ಲಿ ಮಂಗಳವಾರದ ವರೆಗೂ 87,20,822 ಮಂದಿ ಕೋವಿಡ್‌ ಲಸಿಕೆ ಹಾಕಿಸಿಕೊಂಡಿದ್ದಾರೆ.

ADVERTISEMENT

ಮಹಾರಾಷ್ಟ್ರದ ಠಾಣೆ ಜಿಲ್ಲೆಯಲ್ಲಿ 285 ಹೊಸ ಪ್ರಕರಣಗಳು ವರದಿಯಾಗಿದ್ದು, ಒಬ್ಬ ವ್ಯಕ್ತಿ ಮೃತಪಟ್ಟಿದ್ದಾರೆ. ಅಲ್ಲಿ ಒಟ್ಟು 2,58,030 ಪ್ರಕರಣಗಳು ದಾಖಲಾಗಿವೆ. ಸೋಮವಾರ ಮಹಾರಾಷ್ಟ್ರದಲ್ಲಿ 3 ಸಾವಿರಕ್ಕೂ ಅಧಿಕ ಪ್ರಕರಣಗಳು ವರದಿಯಾಗಿವೆ. ಇದರಿಂದಾಗಿ ಸರ್ಕಾರ ಮತ್ತೊಮ್ಮೆ ಲಾಕ್‌ಡೌನ್‌ ಜಾರಿ ಮಾಡುವ ಬಗ್ಗೆ ಯೋಚಿಸುತ್ತಿರುವುದಾಗಿ ಹೇಳಿದೆ.

ಪ್ರಸ್ತುತ ಮಹಾರಾಷ್ಟ್ರದಲ್ಲಿ 37,383 ಪ್ರಕರಣಗಳು ಸಕ್ರಿಯವಾಗಿವೆ. ಕೇರಳದಲ್ಲಿ 61,550 ಹಾಗೂ ಕರ್ನಾಟಕದಲ್ಲಿ 5,791, ತಮಿಳುನಾಡಿನಲ್ಲಿ 4,232, ಪಶ್ಚಿಮ ಬಂಗಾಳದಲ್ಲಿ 3,960 ಪ್ರಕರಣಗಳು ಸಕ್ರಿಯವಾಗಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.