ADVERTISEMENT

Covid-19 India Update: 30 ಲಕ್ಷ ದಾಟಿದ ಸೋಂಕಿತರ ಸಂಖ್ಯೆ

ಏಜೆನ್ಸೀಸ್
Published 23 ಆಗಸ್ಟ್ 2020, 4:51 IST
Last Updated 23 ಆಗಸ್ಟ್ 2020, 4:51 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ದೇಶದಲ್ಲಿ 24 ಗಂಟೆ ಅವಧಿಯಲ್ಲಿ 69,239 ಹೊಸ ಕೊರೊನಾ ವೈರಸ್ ಪ್ರಕರಣಗಳು ದೃಢಪಟ್ಟಿದ್ದು, 912 ಮಂದಿ ಮೃತಪಟ್ಟಿದ್ದಾರೆ. ಇದರೊಂದಿಗೆ, ಈವರೆಗೆ ಸೋಂಕಿತರಾದವರ ಒಟ್ಟು ಸಂಖ್ಯೆ 30 ಲಕ್ಷ ದಾಟಿದೆ.

ಈವರೆಗೆ ಒಟ್ಟು 30,44,941 ಮಂದಿಗೆ ಸೋಂಕು ತಗುಲಿದ್ದು, 22,80,567 ಮಂದಿ ಗುಣಮುಖರಾಗಿದ್ದಾರೆ. 56,706 ಸಾವು ಸಂಭವಿಸಿದೆ. ಸದ್ಯ 7,07,668 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಆಗಸ್ಟ್‌ 22ರ ವರೆಗೆ ದೇಶದಲ್ಲಿ 3,52,92,220 ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಶನಿವಾರ 8,01,147 ಮಾದರಿಗಳ ಪರೀಕ್ಷೆ ನಡೆಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ತಿಳಿಸಿದೆ. ‘ದೇಶದಲ್ಲಿ 24 ಗಂಟೆ ಅವಧಿಯಲ್ಲಿ 10 ಲಕ್ಷ ಜನರ ಕೊರೊನಾ ಪರೀಕ್ಷೆ ನಡೆಸಲಾಗಿದೆ. ದಿನವೊಂದರಲ್ಲಿ ನಡೆಸಲಾದ ಗರಿಷ್ಠ ಪರೀಕ್ಷೆ ಇದಾಗಿದೆ’ ಎಂದು ಸಚಿವಾಲಯ ಶನಿವಾರ ಸಂಜೆ ಹೇಳಿತ್ತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.