ನವದೆಹಲಿ: ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶದಾದ್ಯಂತ 34,956 ಹೊಸ ಕೋವಿಡ್–19 ಪ್ರಕರಣಗಳು ದೃಢಪಟ್ಟಿದ್ದು, 687 ಮಂದಿ ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.
ಇದರೊಂದಿಗೆ ದೇಶದಲ್ಲಿ 10,03,832 ಮಂದಿಗೆ ಸೋಂಕು ತಗುಲಿದ್ದು, ಇದುವರೆಗೆ25,602 ಮಂದಿ ಸಾವಿಗೀಡಾಗಿದ್ದಾರೆ.
ಇದುವರೆಗೆ 6,35,757 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸದ್ಯ 3,42,473 ಸಕ್ರಿಯ ಪ್ರಕರಣಗಳು ಇವೆ.
ದೇಶದಲ್ಲಿ ಅತಿ ಹೆಚ್ಚು ಪ್ರಕರಣಗಳನ್ನು ಹೊಂದಿರುವ ಮಹಾರಾಷ್ಟ್ರದಲ್ಲಿ 2.76 ಲಕ್ಷ ಜನರಿಗೆ ಸೋಂಕು ತಗುಲಿದೆ. ಇದುವರೆಗೆ 10,928 ಮಂದಿ ಮೃತಪಟ್ಟಿದ್ದಾರೆ.ತಮಿಳುನಾಡಿನಲ್ಲಿ 1.52 ಲಕ್ಷ ಮಂದಿಗೆ ಸೋಂಕು ದೃಢಪಟ್ಟಿದ್ದು, 2,167 ಮಂದಿ ಸಾವಿಗೀಡಾಗಿದ್ದಾರೆ. ಇತ್ತ ರಾಜಧಾನಿ ದೆಹಲಿಯಲ್ಲಿ 1.17 ಲಕ್ಷ ಮಂದಿಗೆ ಸೋಂಕಿ ತಗುಲಿದೆ. ಇದುವರೆಗೆ 3,487 ಮಂದಿ ಕೊನೆಯುಸಿರೆಳೆದಿದ್ದಾರೆ.
ಗುರುವಾರ ಒಂದೇ ದಿನ ಬೆಂಗಳೂರಿನಲ್ಲಿ 2,344 ಸೇರಿದಂತೆ ರಾಜ್ಯದಲ್ಲಿ 4,169 ಮಂದಿಗೆ ಕೋವಿಡ್ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದುವರೆಗೆ 51, 422 ಮಂದಿ ಸೋಂಕು ತಗುಲಿದ್ದು, ಮೃತರ ಸಂಖ್ಯೆ 1,032 ಕ್ಕೆ ಏರಿಕೆಯಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.